Advertise

13 September 2025

14.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


14.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ದಿನದ ಹೆಚ್ಚಿನ ಅವಧಿಯೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಅವಧಿಯ ಬಿಸಿಲು ಇರಬಹುದು.
ಈಗಿನಂತೆ ಸೆಪ್ಟೆಂಬರ್ 15ರಿಂದ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಲೆನಾಡು :  ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಕಡಿಮೆ ಇರಬಹುದು. ಹಾಸನ ಜಿಲ್ಲೆಯ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಒಂದೆರಡು ದಿನ ಅಲ್ಲಲ್ಲಿ ತುಂತುರು ಮಳೆಯ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಯಚೂರು ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 16ರ ನಂತರ  ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಅಲ್ಲಲ್ಲಿ ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 19ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯ ವಾಯುಭಾರ ಕುಸಿತವು ಈಗಾಗಲೇ ಮಹಾರಾಷ್ಟ್ರ ತಲುಪಿದ್ದು ಸೆಪ್ಟೆಂಬರ್ 15ರ ತನಕ ಮಹಾರಾಷ್ಟ್ರದಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾದರೂ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...