ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ದಿನಕ್ಕೆ ಒಂದೆರಡು ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 18ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮುಂಗಾರು ಉತ್ತರ ಭಾರತದಲ್ಲಿ ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ, ರಾಜ್ಯದಲ್ಲಿ ಒಕ್ಟೊಬರ್ 2ನೇ ವಾರದಲ್ಲಿ ಆರಂಭವಾಗಬಹುದು.
No comments:
Post a Comment