Advertise

17 September 2025

18.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಇವತ್ತು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ತೀವ್ರತೆ ಕಡಿಮೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಸೆಪ್ಟೆಂಬರ್ 19ರಿಂದ ಮಳೆ ಕಡಿಮೆಯಾಗಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. 

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

No comments:

Post a Comment

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...