Advertise

20 September 2025

21.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


21.09.225ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 25ರ ತನಕ ಮುಂದುವರಿಯಲಿದ್ದು, ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚುರುಕಾಗಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಬಿಸಿಲು ಹಾಗೂ ಮೋಡದ ವಾತಾವರಣ ಸೆಪ್ಟೆಂಬರ್ 25ರ ತನಕ ಮುಂದುವರಿಯಲಿದ್ದು, 26ರಿಂದ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 26 ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 28ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಉತ್ತರ ಮಯನ್ಮಾರ್ ಕರಾವಳಿಯಲ್ಲಿ ಸೆಪ್ಟೆಂಬರ್ 25ರಂದು ಪ್ರಭಲ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 

No comments:

Post a Comment

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...