ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆಗೆ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 25ರ ತನಕ ಮುಂದುವರಿಯಲಿದ್ದು, ನಂತರ ವಾಯುಭಾರ ಕುಸಿತದ ಪರಿಣಾಮ ಮುಂಗಾರು ಸ್ವಲ್ಪ ಚುರುಕಾಗಿ ಒಕ್ಟೊಬರ್ 1 ಅಥವಾ 2ರ ತನಕವೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 23ರಿಂದ ಬಿಸಿಲಿನ ವಾತಾವರಣ ಹೆಚ್ಚಲಿದ್ದು, ಸೆಪ್ಟೆಂಬರ್ 27ರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 23ರ ತನಕ ದಕ್ಷಿಣ ಒಳನಾಡು ಹಾಗೂ 29ಲ ತನಕ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.
No comments:
Post a Comment