Advertise

23 September 2025

24.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಳೆಯ ಅವಧಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಈ ಮಳೆಯ ವಾತಾವರಣವು ಈ ತಿಂಗಳ ಅಂತ್ಯದವರೆಗೂ ಮುಂದುವರಿಯುವ ಸಾಧ್ಯತೆಗಳಿವೆ. 27ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಇದೇ ವಾತಾವರಣವು ಸೆಪ್ಟೆಂಬರ್ 26ರ ತನಕ ಮುಂದುವರಿಲಿದ್ದು, ನಂತರ ಮಳೆಯ ಪ್ರಮಾಣವು ಸ್ವಲ್ಪ ಹೆಚ್ಚಾಗಬಹುದು.

ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಈ ತಿಂಗಳ ಕೊನೆಯವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ದಕ್ಷಿಣ ಚೀನಾದ ಕರಾವಳಿಯಲ್ಲಿ ಪ್ರಭಲ ಚಂಡಮಾರುತದ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ಉತ್ತಮವಾಗಿದೆ. ಈ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದಂತೆಯೇ ಸೆಪ್ಟೆಂಬರ್ 25ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ.
ಇದೇ ಸಮಯದಲ್ಲಿ ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪ್ಪೀನ್ಸ್ ಮಧ್ಯೆ ದಕ್ಷಿಣ ಚೀನಾ ಸಮುದ್ರದಲ್ಲಿ ಇನ್ನೊಂದು ಚಂಡಮಾರುತ ಉಂಟಾಗುವ ಲಕ್ಷಣಗಳಿವೆ. 

No comments:

Post a Comment

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...