ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ಈ ರೀತಿಯ ಸಾಮಾನ್ಯ ಮಳೆಯು ಒಕ್ಟೊಬರ್ 4 ಅಥವಾ 5 ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಸೆಪ್ಟೆಂಬರ್ 30ರಿಂದ 3 ದಿವಸಗಳ ಕಾಲ ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಈಗಿನ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 27ರ ತನಕ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 28ರಿಂದ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
No comments:
Post a Comment