Advertise

27 September 2025

28.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ದೀರ್ಘ ಅವಧಿಯ ಮಳೆ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ಸೆಪ್ಟೆಂಬರ್ 29ರಿಂದ ಮಳೆಯ ತೀವ್ರತೆ ಕಡಿಮೆಯಾಗಬಹುದು. ಒಕ್ಟೊಬರ್ 4ರ ತನಕ ಈ ಮಳೆಯು ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರಿನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಸೆಪ್ಟೆಂಬರ್ 28ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಆದರೆ ಒಕ್ಟೊಬರ್ 4ರಿಂದ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 29ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಒಕ್ಟೊಬರ್ 2 ಅಥವಾ 3 ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಭೂ ಪ್ರವೇಶಿಸಿದ್ದು, ಒಡಿಶಾ, ಅಂದ್ರಾ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಮೂಲಕ ತಿರುಗುತ್ತಿದೆ. ಸೆಪ್ಟೆಂಬರ್ 28ರಂದು ಮಹಾರಾಷ್ಟ್ರದ ಮುಂಬೈ ಕರಾವಳಿಯ ಮೂಲಕ ಅರಬ್ಬಿ ಸಮುದ್ರ ಸೇರುವ ಸಾಧ್ಯತೆಗಳಿವೆ. 

No comments:

Post a Comment

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...