ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಸುಳ್ಯ ತಾಲ್ಲೂಕಿನಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಬಿಟ್ಟು ಬಿಟ್ಟು ಬಿರುಸಿನ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಒಕ್ಟೊಬರ್ 4ರ ತನಕ ಈ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. ನಾಲ್ಕೂ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು.
ಈಗಿನಂತೆ ಒಕ್ಟೊಬರ್ 4ರ ತನಕವೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ತೀವ್ರತೆ ಕಡಿಮೆಯಾಗಿದ್ದರೂ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 30ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದೆ.
ಆದರೆ ಒಕ್ಟೊಬರ್ 2 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಈಗಿನ ವಾಯುಭಾರ ಕುಸಿತವು ಇವತ್ತು ಮಹಾರಾಷ್ಟ್ರದ ಮುಂಬೈ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಒಕ್ಟೊಬರ್ 2ರ ಸುಮಾರಿಗೆ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ.
No comments:
Post a Comment