Advertise

31 October 2025

01.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


01.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 1ರಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಿದ್ದರೂ ನವೆಂಬರ್ 4 ಅಥವಾ 5 ರಿಂದ ಮುಂಗಾರು ರೀತಿಯ ಮಳೆಯ ಸಾಧ್ಯತೆ ಕಾಣಿಸುತ್ತಿದೆ. ಒಂದು ವಾರದ ತನಕ ಮುಂದುವರಿಯುವ ಸಾಧ್ಯತೆಯೂ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ನವೆಂಬರ್ 1ರಿಂದ ಬಿಸಿಲಿನ ವಾತಾವರಣ ಇದ್ದರೂ ನವೆಂಬರ್ 4ರಿಂದ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಬೆಳಗಾವಿ, ಧಾರವಾಡ ಬಾಗಲಕೋಟೆ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 1ರಿಂದ ಮೋಡದ ವಾತಾವರಣ ಕಡಿಮೆಯಾದರೂ, ನವೆಂಬರ್ 4ರಿಂದ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ನವೆಂಬರ್ 5ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ನವೆಂಬರ್ 1ರಂದು ಗುಜರಾತ್ ಕರಾವಳಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಇದರೊಂದಿಗೆ ದೇಶದ ಪಶ್ಚಿಮ ಕರಾವಳಿಯಲ್ಲಿ ಮುಂಗಾರು ರೀತಿಯ ಮಳೆಯ ವಾತಾವರಣ ಉಂಟಾಗುವ ಸಾಧ್ಯತೆಗಳಿವೆ.
ಆದರೆ ನವೆಂಬರ್ ಮೊದಲ ವಾರದಲ್ಲಿ ಉತ್ತಮ ಛಳಿ ಆರಂಭವಾದರೆ ಮಾತ್ರ ಮಳೆಯ ಬದಲು ಮೋಡದ ವಾತಾವರಣ ಇರಬಹುದು. 

30 October 2025

31.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಗಾಳಿಯು ನೈರುತ್ಯದಿಂದ ಈಶಾನ್ಯಕ್ಕೆ ಚಲಿಸುತ್ತಿರುವುದರಿಂದ (ಮುಂಗಾರು ರೀತಿ) ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 5ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಮಳೆ ಕಡಿಮೆ ಇರಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 4ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 31ರಿಂದ ಬಿಸಿಲು ವಾತಾವರಣ ಹೆಚ್ಚಿರುವ ಸಾಧ್ಯತೆಗಳಿವೆ. ನವೆಂಬರ್ 3 ಅಥವಾ 4ರಿಂದ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3ರಿಂದ 4 ದಿನಗಳ ಕಾಲ ಉಳಿಯಲಿದ್ದು, ನಂತರ ಗುಜರಾತ್ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದೆ

28 October 2025

29.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೋಡ ವಾತಾವರಣವು ನಾಳೆಯೂ ಮುಂದುವರಿಯಲಿದ್ದು, ಸಣ್ಣ ಪ್ರಮಾಣದ ಬಿಸಿಲು ಸಹ ಇರಬಹುದು. ಮಳೆಯ ಸಾಧ್ಯತೆ ಕಡಿಮೆಯಾಗಿದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಒಕ್ಟೊಬರ್ 29ರಿಂದ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ಉತ್ತರ ಒಳನಾಡಿನ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೋಡದ ವಾತಾವರಣ ನಾಳೆಯೂ ಮುಂದುವರಿಯಲಿದ್ದು, ನಂತರ ಬಿಸಿಲು ಹೆಚ್ಚಾಗುವ ನಿರೀಕ್ಷೆ ಇದೆ. 

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಒಕ್ಟೊಬರ್ 29ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ತೀರದಲ್ಲಿದ್ದು, ಬಂಗಾಳಕೊಲ್ಲಿಯ ಚಂಡಮಾರುತವು ಆಂದ್ರಾ ಕರಾವಳಿಯೀಂದ ನಾಳೆ ಒಡಿಸ್ಸಾ ಕರಾವಳಿ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 

27 October 2025

28.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸ್ವಲ್ಪ ಕಡಿಮೆ ಇರಬಹುದು.
ಈಗಿನಂತೆ ಒಕ್ಟೊಬರ್ 28ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಒಳನಾಡು ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಒಕ್ಟೊಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. 

ಉತ್ತರ ಒಳನಾಡು : ಬೀದರ್ ಜಿಲ್ಲೆಯ ಒಂದೆರಡು ಭಾಗಗಳಲ್ಲಿ, ಬೆಳಗಾವಿ, ಧಾರವಾಡ, ಕಲಬುರ್ಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಒಕ್ಟೊಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗಬಹುದು. 

ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಒಕ್ಟೊಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ತೀರದಲ್ಲಿ ಬೀಡು ಬಿಟ್ಟಿದ್ದು, ಇನ್ನೆರಡು ದಿನಗಳಲ್ಲಿ ಗುಜರಾತ್ ತೀರ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ. 
ಬಂಗಾಳಕೊಲ್ಲಿಯಲ್ಲಿಯ ಚಂಡಮಾರುತವು ತಮಿಳುನಾಡು ಕರಾವಳಿಗೆ ತಲುಪಿದ್ದು, ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. 

24 October 2025

25.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮುಂಜಾನೆಯಿಂದಲೇ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಮಧ್ಯಾಹ್ನ ನಂತರ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ.
ಈ ಮಳೆಯು ನವೆಂಬರ್ 1ನೇ ತಾರೀಕಿನ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ  ಈ ಮಳೆಯ ವಾತಾವರಣವು ಒಕ್ಟೊಬರ್ 29ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ.

ಉತ್ತರ ಒಳನಾಡು :  ಉತ್ತ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಾಗೂ ಉಳಿದ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ನವೆಂಬರ್ 1ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಈ ಮಳೆಯು ಒಕ್ಟೊಬರ್ 28ರ ತನಕ ಮುಂದುವರಿಯುವ ಸೂಚನೆಗಳಿವೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸಿ ಅಲ್ಲಿಂದ ವಾಯವ್ಯ ಕಡೆಗೆ ಸಾಗುವ ನಿರೀಕ್ಷೆ ಇದೆ. 
ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಪ್ರಭಲಗೊಂಡು ತಮಿಳುನಾಡು, ಆಂದ್ರಾ ಕರಾವಳಿಯ ಸಮೀಪ ಬರುವ ಸಾಧ್ಯತೆ ಇದೆ. 

23 October 2025

24.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.25ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಾಧ್ಯತೆಯೂ ಇದೆ. 

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಾಧ್ಯತೆಯೂ ಇದೆ. 

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ, ರಾಯಚೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸುತ್ತಮುತ್ತ) ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಬಂಗಾಳಕೊಲ್ಲಿಯ ತಿರುಗುವಿಕೆಯು ಒಕ್ಟೊಬರ್ 24ರಂದು ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. 
ರಾಜ್ಯದಲ್ಲಿ ಒಕ್ಟೊಬರ್ 28ರ ತನಕವೂ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

22 October 2025

23.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 28ರ ತನಕ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 27ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಭಾಗಗಳ ತಾಲೂಕುಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. 
ಈಗಿನಂತೆ ಒಕ್ಟೊಬರ್ 23ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮುಂಜಾನೆಯಿಂದಲೇ ತುಂತುರು ಮಳೆ ಆರಂಭವಾಗಿದೆ. 
ಈಗಿನಂತೆ ಒಕ್ಟೊಬರ್ 29ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ಈಗಿನ IMD ಮುನ್ಸೂಚನಾ ನಕ್ಷೆಯಂತೆ ಅರಬ್ಬಿ ಸಮುದ್ರದಲ್ಲಿ ಅಥವಾ ಬಂಗಾಳಕೊಲ್ಲಿಯಲ್ಲಿ ಭಾರಿ ಪ್ರಮಾಣದ ವಾಯುಭಾರ ಕುಸಿತ ಅಥವಾ ಚಂಡಮಾರುತದ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇನ್ನೆರಡು ದಿನಗಳ ಕಾಲ ಕಾದು ನೋಡಬೇಕಾಗಿದೆ. 

22.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತ ಚಲಿಸುವ ಪಥದ ಮೇಲೆ ಅವಲಂಬಿಸಿ ಮುಂದಿನ 10 ದಿನಗಳವರೆಗೂ  ಮಳೆಯ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಚಂಡಮಾರುತ ಚಲಿಸುವ ಪಥದ ನಿಖರತೆಯ ಮೇಲೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಚಂಡಮಾರುತದ ಪರಿಣಾಮದ ಮೇಲೆ ಮುಂದಿನ 10 ದಿನಗಳವರೆಗೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸೂಚನೆಗಳಿವೆ. 

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಚಂಡಮಾರುತದ ಪ್ರಭಾವದ ಮೇಲೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಈಗಿನಂತೆ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯಲ್ಲಿ 2 ಚಂಡಮಾರುತಗಳು 24ರಂದು ಒಟ್ಟು ಸೇರಿ ಪ್ರಭಲ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ. ಚಲಿಸುವ ಪಥ ನಿಶ್ಚಿತವಾಗಿಲ್ಲ. 

20 October 2025

21.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 29ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಒಕ್ಟೊಬರ್ 28ರ ತನಕ ಈ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 29ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 29ರ ತನಕ ಈ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಕ್ಟೊಬರ್ 23ರ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಗೊಂಡು ತಮಿಳುನಾಡು ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದೆ. ಒಂದು ಲೆಕ್ಕಾಚಾರದಂತೆ ಭಾರತದ ಪೂರ್ವ ಕರಾವಳಿಯಲ್ಲಿ ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ಈ ರೀತಿ ಆದರೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. 
ಇನ್ನೊಂದು ವರದಿಯಂತೆ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸಿ ಒಕ್ಟೊಬರ್ 26ರ ಸುಮಾರಿಗೆ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಈ ರೀತಿಯಾದ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. 
ಚಲಿಸುವ ಪಥ ಇನ್ನೂ ನಿಶ್ಚಿತವಾಗಿಲ್ಲ. 

19 October 2025

20.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


20.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಒಕ್ಟೊಬರ್ 22ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈಗಿನ ಲೆಕ್ಕಾಚಾರದಂತೆ ಒಕ್ಟೊಬರ್ 25 ಅಥವಾ 26ರಂದು ಈ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡು, ತಮಿಳುನಾಡು ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ.
ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. 

21.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಮುನ್ಸೂಚನೆ : 

02.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18 October 2025

19.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಾಮಾನ್ಯ ಇರಬಹುದು) ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 19ರಿಂದ ಮುಂದಿನ ಅಲ್ಲಲ್ಲಿ ಸಾಮಾನ್ಯ ಆರಂಭವಾಗುವ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಅರಬ್ಬಿ ಸಮುದ್ರದ ತಿರುವಿಕೆಯು ಒಕ್ಟೊಬರ್ 19ರಂದು ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿದ್ದು, 22ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆಗಳಿವೆ. 
ಈಗಿನಂತೆ ಈ ಚಂಡಮಾರುತವು ತಮಿಳುನಾಡು ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿದ್ದು, ರಾಜ್ಯದಲ್ಲೂ ಉತ್ತಮ ಮಳೆಯ ಲಕ್ಷಣಗಳಿವೆ. 
ಒಕ್ಟೊಬರ್ 24ರಿಂದ ಸ್ವಾತಿ ಮಳೆ ಆರಂಭವಾಗಲಿದ್ದು, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಸೂಚನೆಗಳಿವೆ. 

25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...