ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕಾಸರಗೋಡು ಜಿಲ್ಲೆಯಲ್ಲಿ ಕರಾವಳಿ ತೀರ ಭಾಗದ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಬೆಳ್ತಂಗಡಿ, ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 8ರಿಂದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 8ರಿಂದ ಮಲೆನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆಗಳಿವೆ.
ಒಳನಾಡು : ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಯಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಒಕ್ಟೊಬರ್ 8ರಿಂದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ
ಉತ್ತರ ಒಳನಾಡಿನ ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನಂತರದ ದಿನಗಳಲ್ಲಿ ಉಳಿದ ಜಿಲ್ಲೆಗಳಲ್ಲಿಯೂ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ಕಡೆಗೆ ಮರುಪ್ರಯಾಣ ಸಾಧ್ಯತೆ ಕಡಿಮೆಯಾಗಿದ್ದು, ಒಮಾನ್ ಕರಾವಳಿಯಲ್ಲೇ ಒಕ್ಟೊಬರ್ 12ರ ಸುಮಾರಿಗೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ.
No comments:
Post a Comment