18 October 2025

19.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಾಮಾನ್ಯ ಇರಬಹುದು) ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 19ರಿಂದ ಮುಂದಿನ ಅಲ್ಲಲ್ಲಿ ಸಾಮಾನ್ಯ ಆರಂಭವಾಗುವ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಅರಬ್ಬಿ ಸಮುದ್ರದ ತಿರುವಿಕೆಯು ಒಕ್ಟೊಬರ್ 19ರಂದು ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿದ್ದು, 22ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆಗಳಿವೆ. 
ಈಗಿನಂತೆ ಈ ಚಂಡಮಾರುತವು ತಮಿಳುನಾಡು ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿದ್ದು, ರಾಜ್ಯದಲ್ಲೂ ಉತ್ತಮ ಮಳೆಯ ಲಕ್ಷಣಗಳಿವೆ. 
ಒಕ್ಟೊಬರ್ 24ರಿಂದ ಸ್ವಾತಿ ಮಳೆ ಆರಂಭವಾಗಲಿದ್ದು, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಸೂಚನೆಗಳಿವೆ. 

No comments:

Post a Comment