ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮುಂಜಾನೆಯಿಂದಲೇ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಮಧ್ಯಾಹ್ನ ನಂತರ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ.
ಈ ಮಳೆಯು ನವೆಂಬರ್ 1ನೇ ತಾರೀಕಿನ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ಮಳೆಯ ವಾತಾವರಣವು ಒಕ್ಟೊಬರ್ 29ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ.
ಉತ್ತರ ಒಳನಾಡು : ಉತ್ತ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಾಗೂ ಉಳಿದ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ನವೆಂಬರ್ 1ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ಮಳೆಯು ಒಕ್ಟೊಬರ್ 28ರ ತನಕ ಮುಂದುವರಿಯುವ ಸೂಚನೆಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸಿ ಅಲ್ಲಿಂದ ವಾಯವ್ಯ ಕಡೆಗೆ ಸಾಗುವ ನಿರೀಕ್ಷೆ ಇದೆ.
ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಪ್ರಭಲಗೊಂಡು ತಮಿಳುನಾಡು, ಆಂದ್ರಾ ಕರಾವಳಿಯ ಸಮೀಪ ಬರುವ ಸಾಧ್ಯತೆ ಇದೆ.
No comments:
Post a Comment