ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಗಾಳಿಯು ನೈರುತ್ಯದಿಂದ ಈಶಾನ್ಯಕ್ಕೆ ಚಲಿಸುತ್ತಿರುವುದರಿಂದ (ಮುಂಗಾರು ರೀತಿ) ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 5ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಮಳೆ ಕಡಿಮೆ ಇರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 4ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 31ರಿಂದ ಬಿಸಿಲು ವಾತಾವರಣ ಹೆಚ್ಚಿರುವ ಸಾಧ್ಯತೆಗಳಿವೆ. ನವೆಂಬರ್ 3 ಅಥವಾ 4ರಿಂದ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3ರಿಂದ 4 ದಿನಗಳ ಕಾಲ ಉಳಿಯಲಿದ್ದು, ನಂತರ ಗುಜರಾತ್ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದೆ
No comments:
Post a Comment