ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 5 ಅಥವಾ 6 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 5ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ಉತ್ತರ ಒಳನಾಡಿನ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಈಗಿನಂತೆ ನವೆಂಬರ್ 3 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 6ರ ತನಕ ಮಳೆಯ ಮುನ್ಸೂಚೆನೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇವತ್ತು ಗುಜರಾತ್ ಕರಾವಳಿ ದಾಟಲಿದ್ದು ಶಿಥಿಲಗೊಳ್ಳುವ ಸಾಧ್ಯತೆಗಳಿವೆ.
ಇದರ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ 5 ರಿಂದ 6 ದಿನಗಳ ತನಕ ಮಳೆಯ ಮುನ್ಸೂಚೆನೆ ಇದೆ.
No comments:
Post a Comment