Advertise

04 November 2025

05.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.11.225ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಾಗಲೇ ಮುಂಜಾನೆ ಉಡುಪಿ ಜಿಲ್ಲೆಯ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಈ ಮೋಡದ ವಾತಾವರಣವು ಮುಂದುವರಿಯಲಿದ್ದು, ನವೆಂಬರ್ 6 ರಿಂದ ಮೂರು ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ನವೆಂಬರ್ 6ರಿಂದ ಮೂರು ದಿನಗಳ ಕಾಲ ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 8ರ ತನಕ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು (ಪಾವಗಢ ಸಹಿತ),
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಪೂರ್ವ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ನವೆಂಬರ್ 8ರ ತನಕ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. 


No comments:

Post a Comment

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...