ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು ಛಳಿಯ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ, ತುಂತುರು ಮಳೆಯ ಮುನ್ಸೂಚನೆ ಇದ್ದರೂ, ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶೀತ ಗಾಳಿಯು ಪ್ರಭಾವದಿಂದ ಮೋಡ ಮಾತ್ರ ಇರಬಹುದು.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 7ರಂದು ಮಾತ್ರ ಮಳೆಯ ಮುನ್ಸೂಚೆನೆ ಇದೆ. ನಂತರ ಛಳಿ ಹಾಗೂ ಒಣ ಹವೆ ಮುಂದುವರಿಯಲಿದೆ.
ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 7ರ ನಂತರ ಉತ್ತರ ಒಳನಾಡಿನಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಆದರೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯು ಪ್ರಭಾವದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಈಗಿನಂತೆ ನವೆಂಬರ್ 8ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಫಿಲಿಪ್ಪೀನ್ಸ್ ಕರಾವಳಿಯ ಪ್ರಭಲ ಚಂಡಮಾರುತದ ಪರಿಣಾಮ ಬಂಗಾಳಕೊಲ್ಲಿಯ ಗಾಳಿಯು ಆ ಕಡೆಗೆ ಸೆಳೆಯಲ್ಪಡುವುದರಿಂದ ಹಿಂಗಾರು ಅಂತ್ಯಗೊಂಡಂತಿದೆ. ಉತ್ತರ ಭಾರತದ ಹಿಮಾಲಯ ಕಡೆಯಿಂದ ಬೀಸುತ್ತಿರುವ ಶೀತ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಛಳಿಯ ವಾತಾವರಣವು ಹೆಚ್ಚಾಗುವ ನಿರೀಕ್ಷೆ ಇದೆ.
No comments:
Post a Comment