ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ
ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 13ರಂದು ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 14ರಿಂದ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 13ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಇನ್ನೆರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿದ್ದು, ನಂತರ ಕಡಿಮೆಯಾದರೂ, ನವೆಂಬರ್ 16ರಿಂದ ಮತ್ತೆ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಚುರುಕಾಗಿದ್ದು, ಜೊತೆಯಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯ ಪ್ರಭಾವದಿಂದ ದಕ್ಷಿಣ ಒಳನಾಡಿನಲ್ಲಿ ಮಾತ್ರ ಮಳೆಯ ಸಾಧ್ಯತೆಗಳಿವೆ.
No comments:
Post a Comment