Advertise

14 November 2025

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ  ನವೆಂಬರ್ 17ರಿಂದ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಮಡಿಕೇರಿ, ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ರಾಜ್ಯದ ಮಲೆನಾಡು ಭಾಗಗಳಲ್ಲಿ ನವೆಂಬರ್ 16ರಿಂದ ಕೊಡಗು, 17ರಿಂದ ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮತ್ತು 19ರಿಂದ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರದ ಗುಂಡ್ಲುಪೇಟೆ ಸುತ್ತಮುತ್ತ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 17ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ಹಿಂಗಾರು ಮಾರುತಗಳ ಚಲನೆಯು ಅಲ್ಪ ಪ್ರಮಾಣದಲ್ಲಿ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...