Advertise

26 November 2025

27.11.20ಆ5ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಬಂಗಾಳಕೊಲ್ಲಿಯ ಥೈಲ್ಯಾಂಡ್, ಮಲೇಶಿಯಾ ಪಶ್ಚಿಮ ತೀರದ ವಾಯುಭಾರ ಕುಸಿತವು ಉತ್ತರ ಸುಮಾತ್ರ ತಲುಪಿದ್ದು, ಅಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಆದರೆ ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಂಡು, ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ಈಗಿನಂತೆ ತಮಿಳುನಾಡು, ಆಂಧ್ರಪ್ರದೇಶ ಕರಾವಳಿ ತೀರದ ಮೂಲಕ ಸಾಗಿ ಒಡಿಸ್ಸಾ ಕರಾವಳಿಯಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನವೆಂಬರ್ 29 ಮತ್ತು 30 ರಂದು ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಬಹುದು. 
ಡಿಸೆಂಬರ್ 1 ರಿಂದ ರಾಜ್ಯದಾದ್ಯಂತ ಒಣ ಹವೆ ಹಾಗೂ ದಿನಕಳೆದಂತೆ ಛಳಿಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿವೆ. 
ಇದರೊಂದಿಗೆ ಹಿಂಗಾರು ಕೊನೆಗೊಳ್ಳಬಹುದು. 

No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...