Advertise

31 December 2025

01.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


01.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. 
ಈಗಿನಂತೆ ಈ ವಾತಾವರಣವು 2026 ಜನವರಿ 4ನೇ ತಾರೀಕಿನ ತನಕ ಮುಂದುವರಿಯುವ ಲಕ್ಷಣಗಳಿವೆ. ನಂತರ ಮೋಡ ಕಡಿಮೆಯಾದರೂ ಛಳಿಯ ವಾತಾವರಣ ಆವರಿಸಲು ಸ್ವಲ್ಪ ಸಮಯ ಬೇಕಾಗಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರಿನ ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಮೋಡದ ವಾತಾವರಣವು 2026 ಜನವರಿ 4ರ ತನಕ ಮುಂದುವರಿಯಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ವಿರಳವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಛಳಿಯ ಪ್ರಮಾಣವು ಕಡಿಮೆಯಾಗಲಿದೆ. 
ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜನವರಿ 3ರ ತನಕ ಈ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಜನವರಿ 1ರಂದು ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈ ವಾತಾವರಣವು 2026ರ ಜನವರಿ 3ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯಲ್ಲಿ ಉಷ್ಣ ಮಾರುತ ಪರಿಚಲನೆ (ಎಂಟಿ ಸೈಕ್ಲೋನಿಕ್ ಸರ್ಕುಲ್ಯೇಶನ್) ಉಂಟಾದ ಪರಿಣಾಮದಿಂದ ರಾಜ್ಯದಲ್ಲಿ ಮೋಡದ ವಾತಾವರಣ ಸೃಷ್ಟಿಯಾಗಿದೆ. 

29 December 2025

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನಂತೆ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ  ಡಿಸೆಂಬರ್ 30ರಿಂದ ಛಳಿಯ ಪ್ರಮಾಣವು ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈ ಮೋಡದ ವಾತಾವರಣವು 2026 ಜನವರಿ 4ನೇ ತಾರೀಕಿನ ತನಕ ಮುಂದುವರಿಯುವ ಮುನ್ಸೂಚನೆ ಇದೆ. 
ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 

ಡಿಸೆಂಬರ್ 31ರಂದು ಬಂಗಾಳಕೊಲ್ಲಿಯಲ್ಲಿ ಗಾಳಿಯ ಅಧಿಕ ಒತ್ತಡ, ಹಾಗೂ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 

25 December 2025

26.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಹಾಗೂ ಉತ್ತರ ಛಳಿಯ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ. 

ಈಗಿನಂತೆ ಡಿಸೆಂಬರ್ 26ರಿಂದ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ದಿಕ್ಕು ಬದಲಾಗುವ ಕಾರಣದಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಛಳಿ ಪ್ರಮಾಣವು ಸ್ವಲ್ಪ ಕಡಿಮೆಯಾಗುವ ಸಾಧ್ಯತೆಗಳಿದ್ದು, ಡಿಸೆಂಬರ್ 28ರಿಂದ ದಕ್ಷಿಣದ ಕನ್ಯಾಕುಮಾರಿ ಕಡೆಯಿಂದ ಉತ್ತರಕ್ಕೆ ಗಾಳಿ ಬೀಸಲು ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಕರಾವಳಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಛಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈ ವಾತಾವರಣವು  2026ರ ಜನವರಿ 2 ಅಥವಾ 3ನೇ ತಾರೀಕಿನ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. ಉತ್ತರ ಒಳನಾಡು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಛಳಿಯು ಕಡಿಮೆಯಾಗಿ ಸಾಮಾನ್ಯ ಛಳಿಯ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ. 

22 December 2025

23.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ, ಛಳಿ ಮುಂದುವರಿಯುವ ಮುನ್ಸೂಚೆನೆ ಇದೆ.
ಡಿಸೆಂಬರ್ 26ರಂದು ಉತ್ತರ ಶ್ರೀಲಂಕಾ ಕೇಂದ್ರವಾಗಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ತಮಿಳುನಾಡು ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗುವ ಸಾಧ್ಯತೆಗಳಿವೆ.

ಇದರ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 26ರ ನಂತರ ಛಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಡಿಸೆಂಬರ್ 29ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಳೆಯ ಸಾಧ್ಯತೆಯ ಬಗ್ಗೆ ಡಿಸೆಂಬರ್ 26ರ ನಂತರ ನೋಡಬೇಕಾಗಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದರೆ ಮಾತ್ರ ಮಳೆಯ ಸಾಧ್ಯತೆಗಳಿವೆ. 

17 December 2025

18.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಅಲ್ಪ ಪ್ರಮಾಣದ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಡಿಸೆಂಬರ್ 18ರಿಂದ ರಾಜ್ಯದಾದ್ಯಂತ ಸ್ವಚ್ಛ ಆಕಾಶದೊಂದಿಗೆ ಒಣ ಹವೆ ಮುಂದುವರಿಯಲಿದೆ. 
ಬಂಗಾಳಕೊಲ್ಲಿಯ ಕಡೆಯಿಂದ ಬಿಸಿದ ಗಾಳಿಯ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಛಳಿ ಕಡಿಮೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಮತ್ತೆ ಛಳಿಯ ವಾತಾವರಣವು ಆರಂಭವಾದರೂ, ತೀವ್ರ ಛಳಿಯ ಸಾಧ್ಯತೆ ಕಡಿಮೆಯಾಗುವ ಸಾಧ್ಯತೆಗಳಿವೆ. 

16 December 2025

17.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಛಳಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿ, ಮಧ್ಯಾಹ್ನ ನಂತರ ನಂತರ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಛಳಿ ಕಡಿಮೆಯಾದರೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 16 ಹಾಗೂ 17ರಂದು ಛಳಿ ಕಡಿಮೆಯಾಗಿ ಮೋಡದ ವಾತಾವರಣ ಇರಲಿದ್ದು, ನಂತರ ಸ್ವಚ್ಛ ವಾತಾವರಣದೊಂದಿಗೆ ಛಳಿಯ ಪ್ರಮಾಣವೂ ಏರಿಕೆಯಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಛಳಿ ಸ್ವಲ್ಪ ಕಡಿಮೆ ಇರಬಹುದು.
ಈಗಿನಂತೆ ಡಿಸೆಂಬರ್ 18ರಿಂದ ಸ್ವಚ್ಛ ವಾತಾವರಣದೊಂದಿಗೆ ಒಣ ಹವೆ, ಛಳಿ ಹೆಚ್ಚಾಗಬಹುದು.

ಉತ್ತರ ಒಳನಾಡು :  ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸ್ವಚ್ಛ ಹಾಗೂ ಒಣ ಹವೆಯೊಂದಿಗೆ ಸ್ವಲ್ಪ ಛಳಿ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಡಿಸೆಂಬರ್ 18ರಿಂದ ಛಳಿ ಹೆಚ್ಚಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಛಳಿ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 17ರ ತನಕ ಮೋಡದ ವಾತಾವರಣ ಇರಲಿದ್ದು, 18ರಿಂದ ಸ್ವಚ್ಛ ವಾತಾವರಣದೊಂದಿಗೆ ಛಳಿಯ ಪ್ರಮಾಣವೂ ಅಧಿಕವಾಗುವ ಸೂಚನೆಗಳಿವೆ. 

ಉತ್ತರ ಭಾರತದ ಅಸ್ವಾಭಾವಿಕ ತಿರುವಿಕೆಯ ವ್ಯಾಪ್ತಿ ಹೆಚ್ಚಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಬೀಸುತ್ತಿರುವುದರಿಂದ ಹಾಗೂ ಅರಬ್ಬಿ ಸಮುದ್ರದ ಕೇರಳ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಈ ಮೋಡದ ವಾತಾವರಣ ಉಂಟಾಗಿದೆ. 
ಈ ಉತ್ತರ ಭಾರತದ ಈ ಬೃಹತ್ ತಿರುಗುವಿಕೆಯು ಪಶ್ಚಿಮಕ್ಕಿಂತ ಚಲಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 18ರಿಂದ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸಲು ಆರಂಭವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಮತ್ತೆ ಛಳಿಯ ಪ್ರಮಾಣವೂ ಹೆಚ್ಚುಗುವ ಸಾಧ್ಯತೆಗಳಿವೆ. 

14 December 2025

15.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆಯೊಂದಿಗೆ ತೀವ್ರ ಛಳಿಯ ವಾತಾವರಣ ಮುಂದುವರಿಯಲಿದೆ. 

ಉತ್ತರ ಭಾರತದ ಅಸ್ವಾಭಾವಿಕ ತಿರುಗುವಿಕೆಯ ಕಾರಣದಿಂದ ಉತ್ತರದ ಶೀತ ಮಾರುತಗಳು ದಕ್ಷಿಣದ ರಾಜ್ಯಗಳ ಕಡೆ ಅಧಿಕ ಪ್ರಮಾಣದಲ್ಲಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ತೀವ್ರ ಛಳಿಯ ವಾತಾವರಣ ಸೃಷ್ಟಿಯಾಗಿದೆ.
ಡಿಸೆಂಬರ್ 15ರಂದು ಈ ತಿರುಗುವಿಕೆಯ ವ್ಯಾಪ್ತಿ ವಿಸ್ತಾರಗೊಂಡು ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಬೀಸಲು ಆರಂಭವಾಗಲಿದೆ. ಇದರಿಂದ ರಾಜ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ. 
ಡಿಸೆಂಬರ್ 15 ಮುಂಜಾನೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಡಿಸೆಂಬರ್ 16 ಹಾಗೂ 17ರಂದು ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಡಿಸೆಂಬರ್ 16, 17ರಂದು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು. 
ಡಿಸೆಂಬರ್ 18 ಅಥವಾ 19ರಿಂದ ಮತ್ತೆ ತೀವ್ರ ಛಳಿಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

13 December 2025

14.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಉತ್ತಮ ಛಳಿ ಹಾಗೂ ಒಣ ಹವೆ ಮುಂದುವರಿಯಲಿದೆ. 

ಮಧ್ಯಮ ಸ್ತರದ ಗಾಳಿಯು ಗುಜರಾತ್ ಹಾಗೂ ರಾಜಸ್ಥಾನ ಕೇಂದ್ರಿಕರಿಕೊಂಡು ಬೃಹತ್ ಗಾತ್ರದಲ್ಲಿ ತಿರುಗುತ್ತಿದ್ದ ಪರಿಣಾಮದಿಂದ ಉತ್ತರ ಭಾರತದ ಕಡೆಯಿಂದ ಶೀತ ಮಾರುತಗಳು ಬಲವಾಗಿ ಬೀಸುತ್ತಿದೆ ಹಾಗೂ ರಾಜ್ಯದ ವಾತಾವರಣ ಉಷ್ಣಾಂಶ ತೀವ್ರವಾಗಿ ಕುಸಿದಿದೆ. 

ಈಗಿನಂತೆ ಡಿಸೆಂಬರ್ 15ರಿಂದ ಈ ತಿರುಗುವಿಕೆಯು ಮತ್ತಷ್ಟು ವಿಸ್ತಾರಗೊಂಡು ಬಂಗಾಳಕೊಲ್ಲಿಯ ತನಕ ತಲಪುವ ನಿರೀಕ್ಷೆಯಿದೆ. ಈ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ಬೀಸಿದರೆ, ವಾತಾವರಣದ ಉಷ್ಣಾಂಶ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿ, ಡಿಸೆಂಬರ್ 15ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 
ಡಿಸೆಂಬರ್ 16 ರಿಂದ 18ರ ತನಕ ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 


05 December 2025

06.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 6ರಿಂದ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಡಿಸೆಂಬರ್ 8ರ ನಂತರ ಒಣ ಹವೆ ಆವರಿಸಿ ಛಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶಿೃಂಗೇರಿ, ಬಾಳೆಹೊನ್ನೂರು, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗದ ಆಗುಂಬೆ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಡಿಸೆಂಬರ್ 6ರಿಂದ ಬಿಸಿಲು ಹಾಗೂ ಮೋಡ ಮಾತ್ರ ಇರಲಿದ್ದು, 8ರಿಂದ ಒಣ ಹವೆಯೊಂದಿಗೆ ಛಳಿ ಹೆಚ್ಚಾಗುವ ನಿರೀಕ್ಷೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಡಿಸೆಂಬರ್ 6ರಿಂದ ಒಣ ಹವೆ ಆವರಿಸಿ ಛಳಿ ಹೆಚ್ಚಾಗುವ ಸಾಧ್ಯತೆಗಳಿವೆ. 

ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಶೀತ ಗಾಳಿಯು ಹಿಂಗಾರು ಮಾರುತಗಳನ್ನು ದುರ್ಬಲಗೊಳಿಸುತ್ತಿದ್ದು, ಡಿಸೆಂಬರ್ 6ರಿಂದ ರಾಜ್ಯದಾದ್ಯಂತ ಒಣಹವೆ ಆವರಿಸಿ 8ರಿಂದ ಛಳಿ ಹೆಚ್ಚಾಗಲು ಪ್ರಾರಂಭವಾಗಬಹುದು. 

04 December 2025

05.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಡಿಸೆಂಬರ್ 7ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ, ಕೊಪ್ಪ, ತೀರ್ಥಹಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. 
ಈಗಿನಂತೆ ಡಿಸೆಂಬರ್ 6ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ರಾತ್ರಿ ಬಳ್ಳಾರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 7ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಡಿಸೆಂಬರ್ 7ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. 

ಉತ್ತರ ಭಾರತದ ಕಡೆಯಿಂದ ಶೀತ ಗಾಳಿಯ ಪ್ರಭಾವ ಹೆಚ್ಚಾದರೆ ಮಾತ್ರ ಹಿಂಗಾರು ಮಾರುತಗಳು ದುರ್ಬಲವಾಗಬಹುದು. 
ಈಗಿನಂತೆ ರಾಜ್ಯದಲ್ಲಿ ಡಿಸೆಂಬರ್ 6ರ ತನಕ ಮಳೆಯ ನಿರೀಕ್ಷೆ ಇದೆ. ನಂತರ ಮಳೆ ಕಡಿಮೆಯಾದರೂ, ದಕ್ಷಿಣ ಕರ್ನಾಟಕದಲ್ಲಿ ಛಳಿ ಹೆಚ್ಚಾಗಲು ಸಮಯ ತೆಗೆದುಕೊಳ್ಳಬಹುದು. 

03 December 2025

04.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಈ ಮೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಈ ಮಳೆಯ ವಾತಾವರಣವು ಡಿಸೆಂಬರ್ 5ರ ತನಕ ಮುಂದುವರಿಯುವ ಸೂಚನೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 4ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಧಾರವಾಡ, ಗದಗ ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ದಕ್ಷಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 4ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ದಿತ್ವಾ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದು, ಇದರ ಪ್ರಭಾವದಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದೆ. ಈಗಿನಂತೆ ಡಿಸೆಂಬರ್ 6ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

02 December 2025

03.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಛಳಿಯ ಪ್ರಮಾಣ ಕಡಿಮೆ ಇರಬಹುದು.
ಈಗಿನಂತೆ ದಿತ್ವಾ ಚಂಡಮಾರುತದ ಪ್ರಭಾವದಿಂದ ಹಿಂಗಾರು ಚುರುಕಾಗಿದ್ದು, ಡಿಸೆಂಬರ್ 6ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ಡಿಸೆಂಬರ್ 3ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಡಿಸೆಂಬರ್ 6ರ ತನಕ ಮಳೆ ಮುಂದುವರಿಯಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಕಾರಣದಿಂದ ಒಣ ಹವೆ ಮುಂದುವರಿಯಲಿದೆ. ಛಳಿ ಸ್ವಲ್ಪ ಕಡಿಮೆ ಇರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 5ರ ತನಕ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ದಿತ್ವಾ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರೂ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. 

01 December 2025

02.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


02.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಛಳಿಯ ಪ್ರಮಾಣ ಕಡಿಮೆ ಇದ್ದರೆ ತಡ ರಾತ್ರಿ ಕಾಸರಗೋಡು, ಮಂಗಳೂರು, ಸುರತ್ಕಲ್ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 
ಉತ್ತರ ಕನ್ನಡ ಜಿಲ್ಲೆಯಲ್ಲಿ ಛಳಿ ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 3ರಿಂದ 5ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಿಂಗಾರು ಮಳೆಯ ಮುನ್ಸೂಚೆನೆ ಇದೆ. ಆದರೆ ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 3ರಿಂದ 5ರ ತನಕ ಕೊಡಗು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಛಳಿಯ ಪ್ರಮಾಣ ಹೆಚ್ಚಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಸಂಜೆ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಆದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 2ರಿಂದ 5ರ ತನಕ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ.

ದಿತ್ವಾ ಚಂಡಮಾರುತದ ಪ್ರಭಾವದಿಂದ ಮುಂದಿನ 5 ದಿನಗಳ ತನಕ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ. ದಿತ್ವಾ ಚಂಡಮಾರುತವು ಡಿಸೆಂಬರ್ 4ರಂದು ತಮಿಳುನಾಡಿನ ಮಹಾಬಲಿಪುರಂ ಕರಾವಳಿಯಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ : ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ...