Advertise

02 December 2025

03.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಛಳಿಯ ಪ್ರಮಾಣ ಕಡಿಮೆ ಇರಬಹುದು.
ಈಗಿನಂತೆ ದಿತ್ವಾ ಚಂಡಮಾರುತದ ಪ್ರಭಾವದಿಂದ ಹಿಂಗಾರು ಚುರುಕಾಗಿದ್ದು, ಡಿಸೆಂಬರ್ 6ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ಡಿಸೆಂಬರ್ 3ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಡಿಸೆಂಬರ್ 6ರ ತನಕ ಮಳೆ ಮುಂದುವರಿಯಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಕಾರಣದಿಂದ ಒಣ ಹವೆ ಮುಂದುವರಿಯಲಿದೆ. ಛಳಿ ಸ್ವಲ್ಪ ಕಡಿಮೆ ಇರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 5ರ ತನಕ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ದಿತ್ವಾ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರೂ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. 

No comments:

Post a Comment

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ : ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ...