Advertise

03 December 2025

04.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಈ ಮೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಈ ಮಳೆಯ ವಾತಾವರಣವು ಡಿಸೆಂಬರ್ 5ರ ತನಕ ಮುಂದುವರಿಯುವ ಸೂಚನೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 4ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಧಾರವಾಡ, ಗದಗ ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ದಕ್ಷಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 4ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ದಿತ್ವಾ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದು, ಇದರ ಪ್ರಭಾವದಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದೆ. ಈಗಿನಂತೆ ಡಿಸೆಂಬರ್ 6ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

No comments:

Post a Comment

06.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...