ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಛಳಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿ, ಮಧ್ಯಾಹ್ನ ನಂತರ ನಂತರ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಛಳಿ ಕಡಿಮೆಯಾದರೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 16 ಹಾಗೂ 17ರಂದು ಛಳಿ ಕಡಿಮೆಯಾಗಿ ಮೋಡದ ವಾತಾವರಣ ಇರಲಿದ್ದು, ನಂತರ ಸ್ವಚ್ಛ ವಾತಾವರಣದೊಂದಿಗೆ ಛಳಿಯ ಪ್ರಮಾಣವೂ ಏರಿಕೆಯಾಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಛಳಿ ಸ್ವಲ್ಪ ಕಡಿಮೆ ಇರಬಹುದು.
ಈಗಿನಂತೆ ಡಿಸೆಂಬರ್ 18ರಿಂದ ಸ್ವಚ್ಛ ವಾತಾವರಣದೊಂದಿಗೆ ಒಣ ಹವೆ, ಛಳಿ ಹೆಚ್ಚಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸ್ವಚ್ಛ ಹಾಗೂ ಒಣ ಹವೆಯೊಂದಿಗೆ ಸ್ವಲ್ಪ ಛಳಿ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಡಿಸೆಂಬರ್ 18ರಿಂದ ಛಳಿ ಹೆಚ್ಚಾಗುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಛಳಿ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 17ರ ತನಕ ಮೋಡದ ವಾತಾವರಣ ಇರಲಿದ್ದು, 18ರಿಂದ ಸ್ವಚ್ಛ ವಾತಾವರಣದೊಂದಿಗೆ ಛಳಿಯ ಪ್ರಮಾಣವೂ ಅಧಿಕವಾಗುವ ಸೂಚನೆಗಳಿವೆ.
ಉತ್ತರ ಭಾರತದ ಅಸ್ವಾಭಾವಿಕ ತಿರುವಿಕೆಯ ವ್ಯಾಪ್ತಿ ಹೆಚ್ಚಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಬೀಸುತ್ತಿರುವುದರಿಂದ ಹಾಗೂ ಅರಬ್ಬಿ ಸಮುದ್ರದ ಕೇರಳ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಈ ಮೋಡದ ವಾತಾವರಣ ಉಂಟಾಗಿದೆ.
ಈ ಉತ್ತರ ಭಾರತದ ಈ ಬೃಹತ್ ತಿರುಗುವಿಕೆಯು ಪಶ್ಚಿಮಕ್ಕಿಂತ ಚಲಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 18ರಿಂದ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸಲು ಆರಂಭವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಮತ್ತೆ ಛಳಿಯ ಪ್ರಮಾಣವೂ ಹೆಚ್ಚುಗುವ ಸಾಧ್ಯತೆಗಳಿವೆ.
No comments:
Post a Comment