Advertise

27 January 2026

28.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಧರ್ಮಸ್ಥಳ, ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಸೋಮೇಶ್ವರ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ಮಳೆ ಸಾಧ್ಯತೆ ಕಡಿಮೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. ಛಳಿಯ ಪ್ರಮಾಣವು ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯೊಂದಿಗೆ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಲಿದ್ದು, ಮಳಯ ಸಾಧ್ಯತೆ ಕಾಣಿಸುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. 

ಬಂಗಾಳಕೊಲ್ಲಿಯ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದು, ಮುಂದಿನ 2 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. 
ಉತ್ತರ ಭಾರತದ ಉತ್ತರ ರಾಜ್ಯಗಳಲ್ಲಿ ಭಾರಿ ಹಿಮಪಾತ ಹಾಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

26 January 2026

27.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಛಳಿಯ ಪ್ರಮಾಣವು ಕಡಿಮೆಯಾಗಿ, ಕಾಸರಗೋಡು ಜಿಲ್ಲೆಯಲ್ಲಿ ತಡ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಹಾಗೂ ರಾತ್ರಿ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಮಂಗಳೂರು ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಜನವರಿ 27ರಿಂದ ಮುಂದಿನ ಎರಡು ದಿನಗಳ ಕಾಲ ಮಳೆ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ, ರಾತ್ರಿ ಮೋಡ ಹಾಗೂ ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜನವರಿ 27ರಿಂದ ಒಂದೆರಡು ದಿನಗಳ ತನಕ ಮೋಡದ ವಾತಾವರಣ ಇರಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸ್ವಲ್ಪ ಮಟ್ಟಿಗೆ ಛಳಿಯೂ ಕಡಿಮೆಯಾಗುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಜನವರಿ 28ರ ತನಕ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ ಮುಂದುವರಿದಿದ್ದರ ಪರಿಣಾಮದಿಂದ Anti cyclonic circulation) ಈ ಮೋಡ ಮಳೆಯ ವಾತಾವರಣವು ಉಂಟಾಗಿದೆ. 
ಇನ್ನೆರಡು ದಿನಗಳಲ್ಲಿ ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ. 
ಉತ್ತರ ಭಾರತದಲ್ಲಿ ಪಶ್ಚಿಮ ಮಾರುತಗಳ ಅಸಮತೋಲನದ(Western disturbance) ಪರಿಣಾಮದಿಂದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

25 January 2026

26.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಸಂಜೆ ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಜನವರಿ 26ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
28ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು. 

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 26ರಂದು ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ಒಣ ಹವೆ ಮುಂದುವರಿಯಲಿದೆ. 

ಉತ್ತರ ಕನ್ನಡ : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ಜನವರಿ 26ರಂದು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ. ಹಾಗೂ ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 26, 27ರಂದು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ ಮುಂದುವರಿದಿದ್ದರ ಪರಿಣಾಮದಿಂದ ತಮಿಳುನಾಡು ಕಡೆಯಿಂದ ತೇವಾಂಶ ಭರಿತ ಗಾಳಿಯು ಬೀಸುತ್ತಿರುವುದರಿಂದ ಈ ಮಳೆಯ ವಾತಾವರಣವು ಸೃಷ್ಟಿಯಾಗಿದೆ. ಜೊತೆಗೆ ಛಳಿಯ ಪ್ರಮಾಣವು ಕಡಿಮೆಯಾಗಿದೆ. 

ಉತ್ತರ ಭಾರತದಲ್ಲಿ ಈ ತಿಂಗಳ ಅಂತ್ಯದವರಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 


31.01.2026ರ ತನಕದ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :

ಬಂಗಾಳಕೊಲ್ಲಿಯಲ್ಲಿ ಉಂಟಾದ ಉಷ್ಣ ಮಾರುತ ಪರಿಚಲನೆಯ (anti cyclonic circulation) ಪರಿಣಾಮದಿಂದ ಜನವರಿ 25ರಿಂದ ಕರಾವಳಿ ಜಿಲ್ಲೆಗಳಲ್ಲಿ ಛಳಿಯ ಪ್ರಮಾಣವು ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಜನವರಿ 26 ಹಾಗೂ 27ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಗಳಿವೆ. 
ಇದರೊಂದಿಗೆ ವಾತಾವರಣದ ತೇವಾಂಶವು ಅಧಿಕವಾಗುವುದರಿಂದ ಮುಂದಿನ ದಿನಗಳಲ್ಲಿ ಛಳಿಯ ಪ್ರಮಾಣವೂ ಕಡಿಮೆಯಾಗಬಹುದು. 
ಜನವರಿ 28ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು ಮುಂದಿನ 2 ದಿವಸಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜನವರಿ 25ರಿಂದ ಛಳಿಯ ಪ್ರಮಾಣವು ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 26 ಹಾಗೂ 27ರಂದು ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 28ರಿಂದ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ನಂತರ ಒಣ ಹವೆ ಮುಂದುವರಿಯಲಿದೆ. ಆದರೆ ಛಳಿಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿಲ್ಲ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಜನವರಿ 26ರಂದು ರಾತ್ರಿಯ ವೇಳೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 28ರ ತನಕ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಒಣ ಹವೆ ಮುಂದುವರಿಯಲಿದೆ. ಆದರೆ ವಾತಾವರಣದ ತೇವಾಂಶ ಹೆಚ್ಚಾಗುವ ನಿರೀಕ್ಷೆ ಇರುವುದರಿಂದ ಛಳಿಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಜನವರಿ 25ರಿಂದ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈ ಮೋಡದ ವಾತಾವರಣವು ಜನವರಿ 27ರ ತನಕ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಒಣ ಹವೆ ಮುಂದುವರಿಯಲಿದೆ. 

ಉತ್ತರ ಭಾರತದಲ್ಲಿ ಪಶ್ಚಿಮದ ವಾತಾವರಣದ ಅಸಮತೋಲನ (Western disturbance) ಪರಿಣಾಮದಿಂದ ಜಮ್ಮು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಭಾರಿ ಹಿಮಪಾತ ಅಥವಾ ಮಳೆಯಾಗುತ್ತಿರುವ ಪರಿಣಾಮದಿಂದ ವಾತಾವರಣದ ಉಷ್ಣಾಂಶವೂ ತೀವ್ರವಾಗಿ ಕುಸಿದಿದೆ. ಜನವರಿ 28ರ ತನಕ ದೆಹಲಿ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ನಂತರದ ದಿನಗಳಲ್ಲಿ ಉತ್ತರ ಭಾರತದಲ್ಲಿ ಒಣ ಹವೆ ಮುಂದುವರಿದರೂ ಛಳಿಯ ಪ್ರಮಾಣ ಸಹ ಕಡಿಮೆಯಾಗುವ ಸಾಧ್ಯತೆಗಳಿವೆ. 



24 January 2026

25.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಜನವರಿ 25ರಂದು ಮೋಡದ ಪ್ರಮಾಣ ಹೆಚ್ಚಾಗಲಿದ್ದು, 26 ಹಾಗೂ 27ರಂದು ಮಲೆನಾಡು ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ಮಳೆಯಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜನವರಿ 26 ಹಾಗೂ 27ರಂದು ಮಲೆನಾಡು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ಜನವರಿ 26ರಂದು ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದಲೇ ಮೋಡದ ವಾತಾವರಣದ ಮುನ್ಸೂಚನೆ ಇದ್ದು,
ಜನವರಿ 25 ಹಾಗೂ 26ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ (anti cyclonic circulation) ಕಾರಣದಿಂದ ತಮಿಳುನಾಡು ಮೂಲಕ ಬೀಸುತ್ತಿರುವ ತೇವಾಂಶ ಭರಿತ ಗಾಳಿಯ ಪರಿಣಾಮದಿಂದ ಈ ಮಳೆಯಾಗುತ್ತಿದೆ.
ಉತ್ತರ ಭಾರತದ ಉತ್ತರ ಭಾಗಗಳಲ್ಲಿ ಪ್ರಭಲ ವಾಯುಭಾರ ಕುಸಿತದಂತಹ ತಿರುವಿಕೆಯ ಕಾರಣದಿಂದ ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಮಳೆ ಅಥವಾ ಭಾರಿ ಹಿಮಪಾತವಾಗುತ್ತಿರುವ ಲಕ್ಷಣಗಳಿದ್ದು, ರಾಜಸ್ಥಾನ, ಪಂಜಾಬ್, ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಜನವರಿ 28ರ ತನಕ ಮಳೆಯ ಮುನ್ಸೂಚನೆ ಇದೆ. 

20 January 2026

27.01.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ವರದಿ

27.01.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ವರದಿ :

ಭಾರತದ ವಾಯವ್ಯ ಭಾಗದ ಪಾಕಿಸ್ತಾನ ಮೂಲಕ ಭಾರಿ ಶೀತ ಮಾರುತಗಳು ಬೀಸುವ ಕಾರಣದಿಂದ ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜನವರಿ 23ರಿಂದ ವಾತಾವರಣದ ಉಷ್ಣಾಂಶ ಅತಿಯಾಗಿ ಕುಸಿಯುವ ಸಾಧ್ಯತೆಗಳಿವೆ. ಜೊತೆಗೆ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ಮೂಲಕ ಉತ್ತರ ಭಾರತ ಕಡೆಗೆ ಬೀಸುವ ಗಾಳಿಯು ತೇವಾಂಶದಿಂದ ಈ ಕೂಡಿರುವುದರಿಂದ ದೆಹಲಿ, ಹರಿಯಾಣ, ಪಂಜಾಬ್, ರಾಜಸ್ತಾನ, ಗುಜರಾತ್, ಉತ್ತರಾಖಂಡ, ಉತ್ತರ ಪ್ರದೇಶ ರಾಜ್ಯಗಳ ಅಲ್ಲಲ್ಲಿ ಜನವರಿ 24 ಹಾಗೂ 25ರಂದು ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲಿ ಉಷ್ಣ ಮಾರುತಗಳ ಪರಿಚಲನೆ (ಎಂಟಿ ಸೈಕ್ಲೋನಿಕ್ ಸರ್ಕುಲ್ಯೇಶನ್) ಉಂಟಾಗುವ ಲಕ್ಷಣಗಳಿದ್ದು, ತಮಿಳುನಾಡು ಮೂಲಕ ಬೀಸುವ ತೇವಾಂಶ ಭರಿತ ಗಾಳಿಯ ಪರಿಣಾಮದಿಂದ ತಮಿಳುನಾಡು ಕೇರಳ ಹಾಗೂ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಜನವರಿ 24 ರಿಂದ 26ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

14 January 2026

15.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಸುಳ್ಯ ಹಾಗೂ ಕಡಬ ತಾಲೂಕುಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಜನವರಿ 15ರಿಂದ ಮಳೆಯ ವಾತಾವರಣ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡ ಇರುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆಗಳಿವೆ. 
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಹಾಗೂ ಶಿವಮೊಗ್ಗದ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನ ನಂತರ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 15ರಿಂದ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 15ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು. 

ದಕ್ಷಿಣ ಭಾರತದ ಉಷ್ಣ ಮಾರುತ ಪರಿಚಲನೆಯು( anti cyclonic circulation) ಉತ್ತರ ಭಾರತದ ಕಡೆ ಚಲಿಸುವ ಲಕ್ಷಣಗಳಿವೆ. 

13 January 2026

14.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಶಿವಮೊಗ್ಗ ಜಿಲ್ಲೆಯ ಗಡಿ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಈ ಮೋಡ ವಾತಾವರಣವು ಜನವರಿ 16ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 15ರಿಂದ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾವೇರಿ ಜಿಲ್ಲೆಯ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜನವರಿ 15ರಿಂದ ಬಿಸಿಲು ವಾತಾವರಣ ಹೆಚ್ಚಿರುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 16ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯಲ್ಲಿ ಮಧ್ಯಮ ಸ್ತರದ ಗಾಳಿಯ ಉಷ್ಣ ಮಾರುತ ಪರಿಚಲನೆ (anti cyclonic circulation) ಮುಂದುವರಿದಿರುವುದರಿಂದ ರಾಜ್ಯದಲ್ಲಿ ಛಳಿಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ.
ಜನವರಿ 17ರ ನಂತರ ಉತ್ತರ ಭಾರತದ ಉತ್ತರ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. 

12 January 2026

13.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜನವರಿ 14ರ ತನಕ ಈ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಈ ವಾತಾವರಣವು ಜನವರಿ 14ರ ತನಕ ಇರಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ, ಸಂಜೆ ಹಾವೇರಿ, ಬೆಳಗಾವಿ, ಧಾರವಾಡ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜನವರಿ 15ರಿಂದ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 15ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯಲ್ಲಿ ಮಧ್ಯಮ ಸ್ತರದ ಗಾಳಿಯ ಉಷ್ಣ ಮಾರುತ ಪರಿಚಲನೆ (anti cyclonic circulation) ಇರುವುದರಿಂದ ಮತ್ತು ಜನವರಿ 16ರ ನಂತರ ಈ ತಿರುಗುವಿಕೆಯು ಮುಂದುವರಿದು ಅರಬ್ಬಿ ಸಮುದ್ರದ ಕಡೆಯಿಂದ ಗುಜರಾತ್ ಮೂಲಕ ಉತ್ತರ ಭಾರತದ ಕಡೆ ಸಾಗುವುದರಿಂದ, ಉತ್ತರ ಭಾರತದ ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

11 January 2026

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ದಕ್ಷಿಣ ಕನ್ನಡದ ಸುಳ್ಯ, ಕಡಬ, ಪುತ್ತೂರು ತಾಲೂಕುಗಳಲ್ಲಿ ಅಲ್ಲಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ, ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಹ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜನವರಿ 14ರ ತನಕ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ನಂತರ ಛಳಿಯ ವಾತಾವರಣ ಇದ್ದರೂ, ಭಾರಿ ಛಳಿಯ ಸಾಧ್ಯತೆ ಕಡಿಮೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಕೊಡಗು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜನವರಿ 14ರ ತನಕ ಈ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬೆಳಿಗ್ಗೆಯಿಂದ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ನಂತರ ಮೋಡ ಕಡಿಮೆಯಾದರೂ ಸಂಜೆ, ರಾತ್ರಿ ವೇಳೆ ಅಲ್ಲಿಲ್ಲಿ ಮತ್ತೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜನವರಿ 14ರಿಂದ ಒಣ ಹವೆ ಮುಂದುವರಿಯಲಿದೆ. ಸ್ವಲ್ಪ ಮಟ್ಟಿಗೆ ಛಳಿಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಅಥವಾ ನಾಳೆ ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಜನವರಿ 15ರಿಂದ ಒಣ ಹವೆ ಮುಂದುವರಿಯಲಿದೆ. ಛಳಿಯ ಪ್ರಮಾಣವು ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು. 

ಬಂಗಾಳಕೊಲ್ಲಿಯ ಶ್ರೀಲಂಕಾ ಕರಾವಳಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದರೂ ಅದರ ಪ್ರಭಾವದಿಂದ ರಾಜ್ಯದಲ್ಲಿ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಠಿಯಾಗಿದೆ. 

10 January 2026

11.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಸ್ವಲ್ಪ ಮಟ್ಟಿಗೆ ಛಳಿ ಕಡಿಮೆ ಇರಬಹುದು. 
ಈಗಿನಂತೆ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜನವರಿ 11 ಹಾಗೂ 12ರಂದು ಅಲ್ಲಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಮೋಡದ ವಾತಾವರಣ ಇರಬಹುದು.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 11 ಹಾಗೂ 12ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಉತ್ತರ ಒಳನಾಡು : ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಬಳ್ಳಾರಿ ಜಿಲ್ಲೆಯ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಮುಂದಿನ 2 ದಿವಸಗಳ ಕಾಲ ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ಮೈಸೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ  ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಈ ವಾತಾವರಣವು ಜನವರಿ 12ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಹಾಗೂ ತಮಿಳುನಾಡು ಮಧ್ಯ ತಲುಪಿದ್ದು, ಅಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 

08 January 2026

09.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಛಳಿ ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಜನವರಿ 10 ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 11ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 12ರಂದು ಮೋಡ ಇರಲಿದ್ದು 13ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಛಳಿ ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಜನವರಿ 10ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 11ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ 11ರಂದು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 13ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಧಿಕ ಛಳಿ ಹಾಗೂ ಒಣ ಹವೆ ಮುಂದುವರಿಯಲಿದೆ. ಜನವರಿ 11ರಂದು ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
12 ಅಥವಾ 13ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ಜನವರಿ 9ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 10 ಹಾಗೂ 11ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 12 ಹಾಗೂ 13ರಂದು ಸ್ವಲ್ಪ ಮೋಡ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜನವರಿ 11ರಂದು ಶ್ರೀಲಂಕಾದ ಆಗ್ನೇಯ ಕರಾವಳಿಗೆ ತಲಪುತ್ತಿದ್ದಂತೆಯೇ ದುರ್ಬಲಗೊಳ್ಳುವ ಲಕ್ಷಣಗೊಂಡು ಶಿಥಿಲಗೊಳ್ಳುವ ಲಕ್ಷಣಗಳಿವೆ. 

04 January 2026

05.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸಲಿದೆ. ಮೋಡ ಅಥವಾ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ಮೇಲೆ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ರಾತ್ರಿ ಸ್ವಚ್ಛ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜನವರಿ 7ರ ತನಕ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 8ರಿಂದ ಶ್ರೀಲಂಕಾ ಬಳಿಯ ವಾಯುಭಾರ ಕುಸಿತದ ಪರಿಣಾಮದಿಂದ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 7ರ ತನಕ ಒಣ ಹವೆ ಮುಂದುವರಿಯಲಿದೆ. 8ರಿಂದ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಸ್ವಚ್ಛ ವಾತಾವರಣ ಕಾಣಿಸುವ ಸಾಧ್ಯತೆ ಇದೆ. ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಜನವರಿ 5ರಿಂದ ಒಣ ಹವೆ ಮುಂದುವರಿಯಲಿದೆ. ಛಳಿಯ ಪ್ರಮಾಣವು ಸಾಮಾನ್ಯವಾಗಿರಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಒಣ ಹವೆ ಹಾಗೂ ಸಾಮಾನ್ಯ ಛಳಿ ಮುಂದುವರಿಯುವ ಮುನ್ಸೂಚೆನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜನವರಿ 7ರಿಂದ ಮತ್ತೆ ಮೋಡ ಹಾಗೂ 8ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಶ್ರೀಲಂಕಾ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಸ್ವಲ್ಪ ಪ್ರಭಲಗೊಂಡು, ಶ್ರೀಲಂಕಾ ಪೂರ್ವ ಕರಾವಳಿಯ ಮೂಲಕ ತಮಿಳುನಾಡು ಕರಾವಳಿಗೆ ಜನವರಿ 8ರಂದು ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಜನವರಿ 8ರಿಂದ ಮಳೆಯ ಮುನ್ಸೂಚನೆ ಇದೆ. 


25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...