03.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಣ್ಣ ಹನಿ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಛಳಿ ಕಡಿಮೆ ಇದ್ದು, ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಈ ಮೋಡದ ವಾತಾವರಣವು ಜನವರಿ 3ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಸಣ್ಣ ಹನಿ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜನವರಿ 3ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸ್ವಚ್ಛ ಹಾಗೂ ಒಣ ಹವೆ ಮುಂದುವರಿಯಲಿದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಛಳಿ ಕಡಿಮೆ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಛಳಿ ಕಡಿಮೆಯಾಗಿ ಯಾಥಾ ಸ್ಥಿತಿ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 3ರ ತನಕ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ.
ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ ಶಿಥಿಲಗೊಂಡಿದ್ದು, ಈಗ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಜನವರಿ 3ರ ತನಕ ಮೋಡದ ವಾತಾವರಣ ಮಾತ್ರ ಇರಬಹುದು.
No comments:
Post a Comment