Advertise

26 February 2026

27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಸೆಖೆ ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿಯೂ ಸಾಧಾರಣ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ( ಸೋಮವಾರಪೇಟೆ ಸಹಿತ) ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಉತ್ತರ ಒಳನಾಡು : ಕಳೆದ 2 ದಿವಸಗಳ ಕಾಲ ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯಾಗಿತ್ತು. ಮುನ್ಸೂಚನೆಯಂತೆ ಇವತ್ತು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರದಲ್ಲಿ ಯಾವುದೇ ಮಹತ್ವದ ವಿದ್ಯಮಾನಗಳು ಇಲ್ಲದ ಕಾರಣ ಅಧಿಕ ತಾಪಮಾನದ ಹಾಗೂ ವಾತಾವರಣದ ತೇವಾಂಶದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಮಳೆಯಾಗುತ್ತಿದೆ. ಈ ಹಿಂದಿನ ವಾಯುಭಾರ ಕುಸಿತದ ಮಳೆಯ ಪರಿಣಾಮವಾಗಿ ವಾತಾವರಣದ ತೇವಾಂಶ ಅಧಿಕಗೊಂಡಿದೆ. 

25 February 2026

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಸೆಖೆ ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಧ್ಯಾಹ್ನ ಅಥವಾ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಧರ್ಮಸ್ಥಳ, ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು, ಫೆಬ್ರುವರಿ 28ರ ತನಕ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ನಂತರ ಬಿಸಿಲಿನ ವಾತಾವರಣ ಇದ್ದರೂ, ಮಾರ್ಚ್ 3 ಅಥವಾ 4ರಿಂದ ಮತ್ತೆ ಮೋಡದ ವಾತಾವರಣ ಇರಬಹುದು.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕರಾವಳಿ ಜಿಲ್ಲೆಗಳಲ್ಲಿ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 

ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಕೊಪ್ಪಳ, ಯಾದಗಿರಿ, ವಿಜಯಪುರ, ರಾಯಚೂರು, ಗುಲ್ಬರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಇರಬಹುದು. 
ಈಗಿನಂತೆ ಫೆಬ್ರುವರಿ 27ರಿಂದ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 

ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಇನ್ನೆರಡು ದಿನಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 

24 February 2026

25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಸೆಖೆಯೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾತ್ರಿ ಹಾಗೂ ಮುಂಜಾನೆಯ ವೇಳೆ ಕಾಸರಗೋಡು, ದಕ್ಷಿಣ ಕನ್ನಡ ಗಡಿ ಭಾಗಗಳ ಅಲ್ಲಲ್ಲಿ, ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಫೆಬ್ರುವರಿ 27ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 1ರಿಂದ ಮಳೆ ಕಡಿಮೆಯಾಗಿ ಮುಂದಿನ 4, 5 ದಿವಸಗಳ ತನಕವೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ರಾತ್ರಿ, ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಫೆಬ್ರುವರಿ 27ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ನಂತರ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ದಾವಣಗೆರೆ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಫೆಬ್ರುವರಿ 28ಲ ತನಕ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ
ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಜಿಲ್ಲೆಯ ಅಲ್ಲಲ್ಲಿ ಹಾಗೂ ತುಮಕೂರಿನ ಪಾವಗಢ ತಾಲೂಕಿನ ಅಲ್ಲಲ್ಲಿ ತಡ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಫೆಬ್ರುವರಿ 28ರ ತನಕವೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಂಡಮಾನ್ ಸಮೀಪ ತಲುಪಿದ್ದು, ಫೆ26ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿವೆ. 
ರಾಜ್ಯದಲ್ಲಿ ಮಾರ್ಚ್ ಮೊದಲ ವಾರದಲ್ಲಿ ಬಿಸಿಲು, ಅಧಿಕ ತಾಪಮಾನ ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಇದ್ದು, ನಂತರ ಬಿಸಿಲಿನ ಅವಧಿ ಹೆಚ್ಚಿರಬಹುದು. 

23 February 2026

24.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಇದೇ ವಾತಾವರಣವು ಫೆಬ್ರುವರಿ 27ರ ತನಕವೂ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರಿನ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪೂರ್ವಕ್ಕೆ ಚಲಿಸಿ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಇದರೊಂದಿಗೆ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿ ಕ್ರಮೇಣ ವಾತಾವರಣದ ಉಷ್ಣತೆ ಹೆಚ್ಚಾಗಬಹುದು. 

22 February 2026

23.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪೂರ್ವಕ್ಕೆ ಚಲಿಸುತ್ತಿದ್ದಂತೆಯೇ ಮಳೆಯ ಸಾಧ್ಯತೆಯೂ ಕಡಿಮೆಯಾಗಬಹುದು. ಆದರೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಫೆಬ್ರುವರಿ 27ರ ತನಕವೂ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಫೆಬ್ರುವರಿ 23ರಿಂದ ಕೊಡಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಫೆಬ್ರುವರಿ 27ರ ತನಕವೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗುಲ್ಬರ್ಗ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಫೆಬ್ರುವರಿ 25ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಫೆಬ್ರುವರಿ 25ರ ನಂತರ ಬಿಸಿಲಿನ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ. 

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗಿದ್ದು, ಪೂರ್ವಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಈ ವಾಯುಭಾರ ಕುಸಿತವು ಪೂರ್ವಕ್ಕೆ ಚಲಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮೋಡ ಹಾಗೂ ಮಳೆಯ ವಾತಾವರಣವು ಕಡಿಮೆಯಾಗಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

21 February 2026

22.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದ ಉತ್ತಮ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಫೆಬ್ರುವರಿ 27ರ ತನಕವೂ ಮಳೆಯ ಮುನ್ಸೂಚನೆ ಇದೆ. ಆದರೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಮೇಲೆ ಅವಲಂಬಿಸಿದೆ. ಕಾದುನೋಡಬೇಕಾಗಿದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಜಿಲ್ಲೆಗಳ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಫೆಬ್ರುವರಿ 25ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಫೆಬ್ರುವರಿ 22ರಿಂದ 24ರ ತನಕ ತುಂತುರು ಮಳೆಯ ಸಾಧ್ಯತೆ ಇದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಫೆಬ್ರುವರಿ 27ರ ತನಕವೂ ಬಿಸಿಲು ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಕೇಂದ್ರವಾಗಿ ಉಂಟಾಗುವ ವಾಯುಭಾರ ಕುಸಿತವು ಪೂರ್ವಾಭಿಮುಖವಾಗಿ ಚಲಿಸುವ ಲಕ್ಷಣಗಳಿದ್ದು, ಇದರಿಂದ ಬಂಗಾಳಕೊಲ್ಲಿಯ ಕಡೆಯಿಂದ ಈಗ ಬೀಸುತ್ತಿರುವ ಗಾಳಿಯು ದುರ್ಬಲಗೊಳ್ಳವುದರಿಂದ ಮಳೆಯ ಪರಿಸ್ಥಿತಿ ಕಾದು ನೋಡಬೇಕಾಗಿದೆ. ಮಳೆಯು ಮುನ್ಸೂಚನೆಯಲ್ಲಿದ್ದಷ್ಟು ಪ್ರಮಾಣದಲ್ಲಿ ಇರುವ ಸಾಧ್ಯತೆಗಳು ಕಡಿಮೆ ಇರಬಹುದು. 

19 February 2026

20.02.026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಫೆಬ್ರುವರಿ 21ರಿಂದ ಒಂದು ವಾರದ ಕಾಲ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಮಲೆನಾಡಿನ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲೆಗಳಲ್ಲಿ ಫೆಬ್ರುವರಿ 21ರಿಂದ 27ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಬಹುದು. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಫೆಬ್ರುವರಿ 21ರಿಂದ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಸಾಧ್ಯತೆಗಳಿದ್ದರೂ ಮಳೆಯ ಮುನ್ಸೂಚನೆ ಇರುವುದಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಫೆಬ್ರುವರಿ 21ರಿಂದ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಆದರೆ ಫೆಬ್ರುವರಿ 21ರಂದು ಉತ್ತರ ಶ್ರೀಲಂಕಾ ಕರಾವಳಿಯಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಇದರ ಜೊತೆಗೆ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಉಷ್ಣ ಮಾರುತ ಪರಿಚಲನೆ ಉಂಟಾಗುವ ಸಂಭವವಿರುವುದರಿಂದ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯ ಉತ್ತಮ ಬೀಸುವಿಕೆಯಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆಗಳಿವೆ. 

18 February 2026

19.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶದೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಪುತ್ತೂರು, ಸುಳ್ಯ ತಾಲೂಕುಗಳ ಕೇರಳ ಗಡಿ ಭಾಗಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯ ಅಲ್ಲಲ್ಲಿ ಸಣ್ಣ ಪ್ರಮಾಣದ ಹನಿ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಫೆಬ್ರುವರಿ 20ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮಲೆನಾಡು :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಣ್ಣ ಪ್ರಮಾಣದ ಹನಿ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಫೆಬ್ರುವರಿ 20ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯೊಂದಿಗೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಗಲಿನ ಉಷ್ಣಾಂಶವೂ ಕೊಂಚ ಏರಿಕೆಯಾಗಲಿದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಮುಂದಿನ ದಿನಗಳಲ್ಲಿ ಹಗಲಿನ ತಾಪಮಾನ ಇನ್ನಷ್ಟು ಏರಿಕೆಯಾಗಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇವತ್ತು ಬಿಸಿಲು ಹಾಗೂ ಹಗಲಿನ ವೇಳೆಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಗಳಿವೆ. 
ಈಗಿನಂತೆ ಫೆಬ್ರುವರಿ 19ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 20ರಿಂದ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. 

ಶ್ರೀಲಂಕಾ ಬಳಿಯ ಈಗಿನ ತಿರುವಿಕೆಯು ಶ್ರೀಲಂಕಾ ದಕ್ಷಿಣ ಕರಾವಳಿಯ ಮೂಲಕ ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. 
ಫೆಬ್ರುವರಿ 20, 21ರಂದು ಉತ್ತರ ಶ್ರೀಲಂಕಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಇದರಿಂದ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. 

17 February 2026

18.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಹಗಲಿನ ಉಷ್ಣಾಂಶ ಹಾಗೂ ವಾತಾವರಣದ ತೇವಾಂಶ ಸ್ವಲ್ಪ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಗಳಿವೆ.
ಇಂದು ಮುಂಜಾನೆ ಕಡಬ ತಾಲೂಕಿನ ಒಂದೆರಡು ಭಾಗಗಳಲ್ಲಿ ಅನಿರೀಕ್ಷಿತ ಸಾಮಾನ್ಯ ಮಳೆಯಾಗಿದೆ.
ಈಗಿನಂತೆ ಫೆಬ್ರುವರಿ 20ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಹಾಗೂ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿಯೂ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಫೆಬ್ರುವರಿ 19ರ ನಂತರ ರಾಜ್ಯದ ಮಲೆನಾಡು ಜಿಲ್ಲೆಗಳ ಅಲ್ಲಲ್ಲಿ ವಾಯುಭಾರ ಕುಸಿತದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗಲಿನ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಗಳಿವೆ.
ಈಗಿನಂತೆ ಮಳೆಯ ಸಾಧ್ಯತೆಗಳು ಕಾಣಿಸುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಫೆಬ್ರುವರಿ 20ರಿಂದ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿದ್ದು, ಮುಂದಿನ 2, 3 ದಿವಸಗಳಲ್ಲಿ ಇನ್ನೊಂದು ವಾಯುಭಾರ ಕುಸಿತದ ಶ್ರೀಲಂಕಾ ಉತ್ತರ ಕರಾವಳಿ ಕಡೆ ಚಲಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ರಾಜ್ಯದಲ್ಲೂ ಮಳೆಯಾಗುವ ಲಕ್ಷಣಗಳಿವೆ. 

14 February 2026

15.02.2026ರಿಂದ 21.02.2026ರ ತನಕದ ಹವಾಮಾನ ವರದಿ

15.02.2026ರಿಂದ 21.02.2026ರ ತನಕದ ಹವಾಮಾನ ವರದಿ :

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

ಇವತ್ತು 14.2.26ರಂದು ಸಂಜೆ ಮಲೆನಾಡು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇದ್ದರೂ, ರಾತ್ರಿಯಾಗುತ್ತಿದ್ದಂತೆಯೇ ಮೋಡಗಳು ಕರಗಿ ಸ್ವಚ್ಛ ಆಗಬಹುದು.
15.2.26ರಿಂದ ಒಣ ಹವೆ ಮುಂದುವರಿದರೂ ವಾರದ ಕೊನೆಯಲ್ಲಿ 19 ಅಥವಾ 20ನೇ ತಾರೀಕಿನಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ಜೊತೆಗೆ ಛಳಿಯ ಪ್ರಮಾಣವು ಕಡಿಮೆಯಾಗಲಿದೆ. 
 ಮುಂದಿನ ವಾರದ 22,23 ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಬಂಗಾಳಕೂಲ್ಲಿಯ ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಫೆಬ್ರುವರಿ 17 ಅಥವಾ 18ರಂದು ಉಂಟಾಗುವ ವಾಯುಭಾರ ಕುಸಿತವು ಅಲ್ಲಿಂದ ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಸುಮಾರು ಫೆಬ್ರುವರಿ 19, 20ರಂದು ರಾಜ್ಯದ ಅಲ್ಲಲ್ಲಿ ಮೋಡ ಹಾಗೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಇದರೊಂದಿಗೆ ಉತ್ತರ ಸುಮಾತ್ರದ ಉತ್ತರ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಲಿಸುವ ಪಥವನ್ನು ಕಾದು ನೋಡಬೇಕಾಗಿದೆ. 
ಇದರೊಂದಿಗೆ ರಾಜ್ಯದಲ್ಲಿ ಛಳಿಯ ಪ್ರಮಾಣವೂ ಕಡಿಮೆಯಾಗಿ ದಿನದ ಹಗಲಿನ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಗಳಿವೆ. 


08 February 2026

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ :

ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ ಒಣ ಹವೆ ಮುಂದುವರಿಯಲಿದೆ. 

ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಫೆಬ್ರುವರಿ 9 ಹಾಗೂ 10ನೇ ತಾರೀಕಿನಂದು ಮಧ್ಯಾಹ್ನ ನಂತರ ಅಲ್ಲಲ್ಲಿ ಹಗುರ ಹಾಗೂ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಸೂರ್ಯನು ಉತ್ತರ ದಿಕ್ಕಿಗೆ ಚಲಿಸುವ ಪ್ರಕ್ರಿಯೆಯಿಂದಾಗಿ ಸಹಜವಾಗಿಯೇ ವಾತಾವರಣದ ಉಷ್ಣತೆ ಹೆಚ್ಚುತ್ತಿದ್ದು, ಇದಕ್ಕೆ ಪೂರಕವಾಗಿ ಸೂರ್ಯ ಜ್ವಾಲಾ ಸ್ಫೋಟಗಳು ಈ ವಾರ ಉಂಟಾಗುವ ವರದಿಗಳಿರುವುದರಿಂದ ಈ ವರ್ಷದ ಬೆಸೆಯ ಉಷ್ಣತೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ. 

ಆದರೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬೇಸಿಗೆ ಹಾಗೂ ಪೂರ್ವ ಮುಂಗಾರು ಮಳೆಯು ಚೆನ್ನಾಗಿರುವ ವರದಿಗಳಿದ್ದು, ಜೂನ್ ತಿಂಗಳಲ್ಲಿ ಎಲ್ ನಿನೋ ಆರಂಭವಾಗುವ ಲಕ್ಷಣಗಳಿವೆ. 
ಇದರಿಂದ ಈ ವರ್ಷದ ಮುಂಗಾರು ದುರ್ಬಲವಾಗಿರುವ ಸಾಧ್ಯತೆಗಳೂ ಇವೆ. 


03 February 2026

04.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಧ್ಯಾಹ್ನ ನಂತರ ಹಾಗೂ ಸಂಜೆ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಸಂಜೆ ಅಥವಾ ರಾತ್ರಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಸಣ್ಣ ಹನಿ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಫೆಬ್ರುವರಿ 5ರಿಂದ ಈ ವಾತಾವರಣವು ಬದಲಾಗಿ ಬಿಸಿಲು ಹೆಚ್ಚಾಗುವ ನಿರೀಕ್ಷೆ ಇದೆ. 

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಈ ವಾತಾವರಣವು ಫೆಬ್ರುವರಿ 5ರ ತನಕ ಮುಂದುವರಿಯುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಛಳಿಯ ಪ್ರಮಾಣ ಕಡಿಮೆಯಾಗಿ ಒಣ ಹವೆ ಮುಂದುವರಿಯಲಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರಿನ ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 
ಈಗಿನಂತೆ ಫೆಬ್ರುವರಿ 5ರಿಂದ ಬಿಸಿಲು ಹೆಚ್ಚಾಗುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯು ಅರಬ್ಬಿ ಸಮುದ್ರ ಪ್ರವೇಶಿಸಿ ಮತ್ತೆ ಭೂಮಿ ಕಡೆಗೆ ತಿರುಗುತ್ತಿರುವುದರಿಂದ ವಾತಾವರಣದ ತೇವಾಂಶ ಹೆಚ್ಚಾಗಿ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಗಳಿವೆ. 
ಉತ್ತರ ಭಾರತದ ಉತ್ತರ ಭಾಗಗಳಲ್ಲಿ ಹಿಮಪಾತ, ಮಳೆ ಮುಂದುವರಿಯುವ ಲಕ್ಷಣಗಳಿವೆ 


02 February 2026

03.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ  ಅಲ್ಲಲ್ಲಿ ಮೋಡದ ವಾತಾವರಣದ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉತ್ತರ ಕನ್ನಡ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯ ಕಾರಣದಿಂದ ಆಂದ್ರಾ ಕರಾವಳಿ ಮೂಲಕ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಈ ಮೋಡ ಹಾಗೂ ತುಂತುರು ಮಳೆಯ ವಾತಾವರಣವು ಉಂಟಾಗಿದೆ. 

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...