Advertise

02 February 2026

03.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ  ಅಲ್ಲಲ್ಲಿ ಮೋಡದ ವಾತಾವರಣದ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉತ್ತರ ಕನ್ನಡ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯ ಕಾರಣದಿಂದ ಆಂದ್ರಾ ಕರಾವಳಿ ಮೂಲಕ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಈ ಮೋಡ ಹಾಗೂ ತುಂತುರು ಮಳೆಯ ವಾತಾವರಣವು ಉಂಟಾಗಿದೆ. 

No comments:

Post a Comment

08.02.2026 ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ

08.02.2026ರಿಂದ 14.02.2026ರ ತನಕದ ಕರ್ನಾಟಕ ಹವಾಮಾನ ವರದಿ : ರಾಜ್ಯದಾದ್ಯಂತ ಈ ವಾರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ...