Advertise

19 February 2026

20.02.026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಫೆಬ್ರುವರಿ 21ರಿಂದ ಒಂದು ವಾರದ ಕಾಲ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಮಲೆನಾಡಿನ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲೆಗಳಲ್ಲಿ ಫೆಬ್ರುವರಿ 21ರಿಂದ 27ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಬಹುದು. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಫೆಬ್ರುವರಿ 21ರಿಂದ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಸಾಧ್ಯತೆಗಳಿದ್ದರೂ ಮಳೆಯ ಮುನ್ಸೂಚನೆ ಇರುವುದಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಫೆಬ್ರುವರಿ 21ರಿಂದ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಆದರೆ ಫೆಬ್ರುವರಿ 21ರಂದು ಉತ್ತರ ಶ್ರೀಲಂಕಾ ಕರಾವಳಿಯಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಇದರ ಜೊತೆಗೆ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಉಷ್ಣ ಮಾರುತ ಪರಿಚಲನೆ ಉಂಟಾಗುವ ಸಂಭವವಿರುವುದರಿಂದ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯ ಉತ್ತಮ ಬೀಸುವಿಕೆಯಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆಗಳಿವೆ. 

No comments:

Post a Comment

25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...