ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪೂರ್ವಕ್ಕೆ ಚಲಿಸುತ್ತಿದ್ದಂತೆಯೇ ಮಳೆಯ ಸಾಧ್ಯತೆಯೂ ಕಡಿಮೆಯಾಗಬಹುದು. ಆದರೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಫೆಬ್ರುವರಿ 27ರ ತನಕವೂ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಬಹುದು.
ಈಗಿನಂತೆ ಫೆಬ್ರುವರಿ 23ರಿಂದ ಕೊಡಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಫೆಬ್ರುವರಿ 27ರ ತನಕವೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗುಲ್ಬರ್ಗ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಫೆಬ್ರುವರಿ 25ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಫೆಬ್ರುವರಿ 25ರ ನಂತರ ಬಿಸಿಲಿನ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ.
ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗಿದ್ದು, ಪೂರ್ವಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಈ ವಾಯುಭಾರ ಕುಸಿತವು ಪೂರ್ವಕ್ಕೆ ಚಲಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮೋಡ ಹಾಗೂ ಮಳೆಯ ವಾತಾವರಣವು ಕಡಿಮೆಯಾಗಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
No comments:
Post a Comment