ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಹನಿ ಮಳೆ ಅಥವಾ ಮುಂಜಾನೆ ಅಧಿಕ ಹಿಮದ ವಾತಾವರಣದ ಸಾಧ್ಯತೆಗಳಿವೆ.
ಮೇಲ್ಸ್ತರದ ಗಾಳಿಯ ಚಲನೆಯಲ್ಲಿ ಮಧ್ಯಾಹ್ನ ನಂತರ ಅರಬ್ಬಿ ಸಮುದ್ರದ ಕಡೆಯಿಂದ ಕರಾವಳಿ ಭಾಗಗಳಿಗೆ ಬೀಸುವ ಕಾರಣದಿಂದ ತುಂತುರು ಮಳೆಯ ಸಾಧ್ಯತೆ ಇದೆ.
ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ಉತ್ತರ ಭಾರತದ ಉಷ್ಣ ಮಾರುತಗಳ ಪರಿಚಲನೆಯು ಮೇಲ್ಸ್ತರದಲ್ಲಿ ದುರ್ಬಲಗೊಳ್ಳುತ್ತಿದ್ದು, ಮಧ್ಯಮ ಸ್ತರದಲ್ಲಿ ಮಾತ್ರ ಪ್ರಭಲವಾಗಿದೆ.