Advertise

30 March 2026

31.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಪುತ್ತೂರು, ಸುಳ್ಯ ತಾಲ್ಲೂಕುಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ದಾವಣಗೆರೆ, ಗದಗ, ವಿಜಯನಗರ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ

ದಕ್ಷಿಣ ಒಳನಾಡು : ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಎಪ್ರಿಲ್ 5ರ ತನಕ ರಾಜ್ಯದಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

29 March 2026

30.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಹೆಚ್ಚಿನ ಅವಧಿ ಮೋಡ ಹಾಗೂ ಅಧಿಕ ತಾಪಮಾನದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. 
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಅಂತಿದ್ದರೂ ಗಾಳಿಯ ತೀವ್ರತೆ ಹೆಚ್ಚಿದ್ದರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮುಂಜಾನೆ ಕೇರಳ - ಕರ್ನಾಟಕ ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 5ರ ತನಕ ಮಳೆಯ ನಿರೀಕ್ಷೆ ಇದೆ. 

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಳಿದ ಭಾಗಗಳಲ್ಲಿ ಗಾಳಿಯ ಒತ್ತಡ, ತೀವ್ರತೆ ಹೆಚ್ಚಿದ್ದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆಯಾಗಿದೆ. 
ಈಗಿನಂತೆ ಮಾರ್ಚ್ 30ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಪ್ರತ್ಯಾವರ್ತ ಮಾರುತ ಅಥವಾ ಮೇಲ್ಮೈ ಸುಳಿಗಾಳಿ
(Anti-cyclonic circulation ) ದುರ್ಬಲತೆಗೊಳ್ಳುತ್ತಿದ್ದರೂ, ಅದರ ಪ್ರಭಾವವು ಎಪ್ರಿಲ್ ಮೊದಲ ವಾರದ ತನಕ ಮುಂದುವರಿಯುವ ಸೂಚನೆಗಳಿವೆ. 


28 March 2026

29.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 4ರ ತನಕ ಈ ಮಳೆಯು ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 4ರ ತನಕ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದ್ದರೂ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ಮ 29ರಿಂದ ಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ರಿಂದ 3 ದಿವಸಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಅರಬ್ಬಿ ಸಮುದ್ರದ ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಅತಿ ಸಣ್ಣ ಪ್ರಮಾಣದ ಪ್ರತ್ಯಾವರ್ತ ಮಾರುತಗಳು ಮೇಲ್ಮೈ ಸುಳಿಗಾಳಿ
(Anti-cyclonic circulation ) ಉಂಟಾದ್ದರಿಂದ ಇವತ್ತು ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. 


27 March 2026

28.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಗಳ ಕಾರ್ಕಳ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಾರ್ಚ್ 28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕೊಪ್ಪ, ಆಗುಂಬೆ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 28ರಿಂದ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 28ರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಪ್ರತ್ಯಾವರ್ತ ಮಾರುತಗಳು (Anti-cyclonic circulation ಅಥವಾ ಮೇಲ್ಮೈ ಸುಳಿಗಾಳಿ) 
ಮುಂದುವರಿದಿದ್ದು, ಇದರಿಂದ ಸಮುದ್ರದ ಕಡೆಯಿಂದ ಸಾಗಿರುವ ಮೋಡದಲ್ಲಿ ಅತ್ಯಧಿಕ  ತೇವಾಂಶ ಇರುವುದರಿಂದ ಹಾಗೂ ಮೇಲ್ಸ್ತರದ ಗಾಳಿಯ ಚಲನೆಯು ನಿಧಾನ ಗತಿಯಲ್ಲಿರುವುದರಿಂದ ಅಲ್ಲಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. 

25 March 2026

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ ಒಂದೆರಡು ದಿನ ಮಳೆ ಕಡಿಮೆಯಾದರೂ ಎಪ್ರಿಲ್ 4 ಅಥವಾ 5ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆ ಇರಬಹುದು.
ಈಗಿನಂತೆ ಈ ಬೇಸಿಗೆ ಮಳೆಯು ಎಪ್ರಿಲ್ 5ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಳೆಯ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ, ಚಿತ್ರದುರ್ಗ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಧ್ಯಮ ಸ್ತರದಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಮಧ್ಯ ಭಾರತದಲ್ಲಿ ಪ್ರತ್ಯಾವರ್ತ ಮಾರುತಗಳ (Anti-cyclonic circulation) ಚಲನೆ ಉಂಟಾಗಿದ್ದು, ಉತ್ತರ ಕರ್ನಾಟಕದಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಮಾರ್ಚ್ 28ರ ನಂತರ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ. 

24 March 2026

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು, ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕೆಲವು ಭಾಗಗಳಲ್ಲಿ ಜೋರು ಇದ್ದರೆ ಉಳಿದ ಹೆಚ್ಚಿನ ಭಾಗಗಳಲ್ಲಿ ಮೋಡಕ್ಕೆ ತಕ್ಕಷ್ಟು ಮಳೆಯ ಇರಲಾರದು. ಮಾರ್ಚ್ 27ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ನಿರೀಕ್ಷೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 27ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಮತ್ತು ಎಪ್ರಿಲ್ ಮೊದಲ ವಾರದ ತನಕ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮಾರ್ಚ್ 27ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ, 30ರಿಂದ ಬಹುತೇಕ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಈ ಮಳೆಯು ಎಪ್ರಿಲ್ ಮೊದಲ ವಾರದ ತನಕ ಮುಂದುವರಿಯುವ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಪ್ರತ್ಯಾವರ್ತ ಮಾರುತಗಳು (Anti-cyclonic circulation) ದುರ್ಬಲಗೊಂಡಿದ್ದರೂ, ಮುಂದುವರಿದಿದೆ. ಸಮುದ್ರದ ಕಡೆಯಿಂದ ಬೀಸುತ್ತಿರುವ ತೇವಾಂಶ ಭರಿತ ಗಾಳಿಯ ಜೊತೆಗೆ ಅಧಿಕ ತಾಪಮಾನದ ಕಾರಣದಿಂದ ಸ್ಥಳೀಯ ತೇವಾಂಶದ ಮೋಡಗಳೂ ಸೇರುವುದರಿಂದ ಇಂತಹ ಪ್ರದೇಶಗಳಲ್ಲೆ ಮಳೆಯಾಗಬಹುದೆಂದು ಹೇಳಲು ಸಾಧ್ಯವಿಲ್ಲ. 


22 March 2026

23.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

ಅರಬ್ಬಿ ಸಮುದ್ರದ ಪ್ರತ್ಯಾವರ್ತ ಮಾರುತವು (Anti-cyclonic circulation) ಶಿಥಿಲಗೊಳ್ಳುತ್ತಿದ್ದು, ಗಾಳಿಯ ಚಲನೆಯು ಯಥಾಸ್ಥಿತಿಗೆ ಮರಳುತ್ತಿದೆ. ( ಭೂ ಪ್ರದೇಶದ ಕಡೆಗೆ). ಇದರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ. 

20 March 2026

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಸಧ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮಾರ್ಚ್ 24ರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಒಂದೆರಡು ಪ್ರದೇಶಗಳಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಮಾರ್ಚ್ 23ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೀದರ್ ಜಿಲ್ಲೆಯ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 
ಈಗಿನಂತೆ ಮಾರ್ಚ್ 24ರಿಂದ ಮೋಡದ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 
ಮಳೆಯ ಬಗ್ಗೆ ಕಾದು ನೋಡಬೇಕಾಗಿದೆ. 

ಬಂಗಾಳಕೊಲ್ಲಿಯ ಪ್ರತ್ಯಾವರ್ತ ಮಾರುತವು  (Anti-cyclonic circulation) ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ಪ್ರತ್ಯಾವರ್ತ ಮಾರುತವು (Anti-cyclonic circulation) ಮುಂದುವರಿದಿದ್ದರ ಪರಿಣಾಮದಿಂದ ಗಾಳಿಯ ಭೂ ಪ್ರವೇಶಿಸುವ ಪ್ರಕ್ರಿಯೆ ದುರ್ಬಲಗೊಂಡಿದೆ. 

19 March 2026

20.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ  ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮಾರ್ಚ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮಾರ್ಚ್ 20ರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮಾರ್ಚ್ 20ರಿಂದ ಮಳೆ ಪ್ರಮಾಣವು ಕಡಿಮೆಯಾಗುವ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮಾರ್ಚ್ 20ರಿಂದ ಮಳೆಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ. 

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ 
ಪ್ರತ್ಯಾವರ್ತ ಮಾರುತಗಳು (Anti-cyclonic circulation) ತಿರುಗುವಿಕೆ ಉಂಟಾಗಿದ್ದರಿಂದ ಭೂಮಿಯ ಕಡೆಗೆ ಬೀಸುವ ತೇವಾಂಶ ಭರಿತ ಗಾಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿರುವುದರಿಂದ ಮಾರ್ಚ್ 20ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

18 March 2026

19.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಇವತ್ತು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ತೀರ ಭಾಗಗಳಲ್ಲಿ ಸಂಜೆ ಕಡಿಮೆ ಇದ್ದರೆ ಮುಂಜಾನೆ ಮಳೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಗಾಳಿಯ ಬೀಸುವಿಕೆಯು ಅತಿ ನಿಧಾನ ಗತಿಯಲ್ಲಿ ಹಾಗೂ ನಿರ್ದಿಷ್ಟ ದಿಕ್ಕು ಇಲ್ಲದ ಕಾರಣ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. 
ರಾಜ್ಯದಲ್ಲಿ ಈ ಮಳೆಯು ಮಾರ್ಚ್ 20ರ ತನಕ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮಾರ್ಚ್ 25 ಅಥವಾ 27ರ ತನಕ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

17 March 2026

18.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಾರ್ಚ್ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಮಾರ್ಚ್ 25ರ ತನಕವೂ ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಈ ಮಳೆಯು ಮಾರ್ಚ್ 29ರ ತನಕ ಮುಂದುವರಿಯುವ ಸೂಚನೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 20ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ...