ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾತ್ರಿ, ತಡ ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹನಿ ಅಥವಾ ಧಟ್ಟ ಮಂಜು ಕವಿಯುವ ಸಾಧ್ಯತೆಗಳಿವೆ.
ಮಲೆನಾಡು. : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಹನಿಗಳ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ತಡ ರಾತ್ರಿ ಮೋಡ ಸ್ವಲ್ಪ ಹೆಚ್ಚಿರಲಿದೆ. ಆದರೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಬಂಗಾಳಕೊಲ್ಲಿಯ ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆ ಉಂಟಾಗಿದ್ದರೂ ಗಾಳಿಯ ಚಲನೆಯು ಭೂಮಿ ಕಡೆಗೆ ಅಷೇನು ಪ್ರಭಲವಾಗಿಲ್ಲ. ಆದ್ದರಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆಗಳಿಲ್ಲ.
ಇನ್ನು ಮಹಾರಾಷ್ಟ್ರ ಕರಾವಳಿಯಲ್ಲಿ ಉಷ್ಣ ಮಾರುತ ಪರಿಚಲನೆಯಂತಹ ತಿರುವಿಕೆ ಉಂಟಾಗಿದ್ದು, ಇದರಿಂದ ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿಯು ದಕ್ಷಿಣ ರಾಜ್ಯಗಳ ಕಡೆಗೆ ಬೀಸುತ್ತಿರುವುದರಿಂದ ಸಧ್ಯಕ್ಕೆ ಮಳೆಯ ಸಾಧ್ಯತೆಗಳಿಲ್ಲ.
No comments:
Post a Comment