ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಬಿಸಿಲು, ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ. ಸಂಜೆ, ರಾತ್ರಿ ವೇಳೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ.
ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಲಿದ್ದು, ಮಳಯ ಸಾಧ್ಯತೆ ಕಾಣಿಸುತ್ತಿಲ್ಲ.
ಮಧ್ಯಮ ಸ್ತರದ ವಾತಾವರಣದಲ್ಲಿ ಉಷ್ಣ ಮಾರುತ ಪರಿಚಲನೆಯು ಮುಂದುವರಿದಿದ್ದರಿಂದ ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ.
No comments:
Post a Comment