Advertise

09 March 2026

10.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆಖೆಯೊಂದಿಗೆ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ.. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೊಡಗಿನ ಕೆರಳ ಗಡಿ ಭಾಗಗಳಲ್ಲಿ, 
ವಯನಾಡು, ಊಟಿ, ಬಂಡೀಪುರ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕರ್ನಾಟಕ - ಕೇರಳ ಗಡಿ ಭಾಗಗಳಲ್ಲಿ ಕಾಸರಗೋಡು ತನಕ ಸಂಜೆ ಅಥವಾ ರಾತ್ರಿ ಮಳೆಯ ಸಾಧ್ಯತೆಗಳಿವೆ (ಗಾಳಿಯ ಪ್ರಭಾವದ ಮೇಲೆ ಅವಲಂಬಿಸಿದೆ). ಧರ್ಮಸ್ಥಳ, ಬೆಳ್ತಂಗಡಿ ಹಾಗೂ ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿಯೂ ಮಧ್ಯಾಹ್ನ ನಂತರ, ಸಂಜೆ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಕೇರಳ ಗಡಿ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗಿನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಹಾಸನ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಶಿೃಂಗೇರಿ, ಕುದುರೆಮುಖ, ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಅಧಿಕ ತಾಪಮಾನ ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 15 ಅಥವಾ 16ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯು ಪ್ರಭಲವಾಗುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

No comments:

Post a Comment

20.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...