Advertise

12 March 2026

13.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಅಧಿಕ ತಾಪಮಾನ ಹಾಗೂ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಗಲು ಸಾಮಾನ್ಯಕ್ಕಿಂತ ಅಧಿಕ ಬಿಸಿಲಿನ ತಾಪ ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ರಾಜ್ಯದ ಉತ್ತರ ಒಳನಾಡು ಹೆಚ್ಚಿನ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಧಿಕ ತಾಪಮಾನದೊಂದಿಗೆ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಇರಬಹುದು.

ಮಧ್ಯಮ ಸ್ತರದಲ್ಲಿ ಅಧಿಕ ತಾಪಮಾನದ ಪರಿಚಲನೆ ( Anti cyclonic circulation) ಮುಂದುವರಿದಿದ್ದು, ಮಾರ್ಚ್ 14ರ ಸುಮಾರಿಗೆ ಈ ಪರಿಚಲನೆಯು ವಿಸ್ತಾರಗೊಂಡು ಬಂಗಾಳಕೊಲ್ಲಿಯ ಮೂಲಕ ಗಾಳಿಯ ಬೀಸುವಿಕೆ ಪ್ರಭಲಗೊಳ್ಳುವ ಸೂಚನೆಗಳಿವೆ. ಇದರ ಪರಿಣಾಮದಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಾರ್ಚ್ 14 ಅಥವಾ 15ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆಗಳಿವೆ. 


No comments:

Post a Comment

20.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...