ಕರಾವಳಿ : ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಅಥವಾ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಅಧಿಕ ತಾಪಮಾನ ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಭಾರತದ ಮಧ್ಯಮ ಸ್ತರದಲ್ಲಿ ಉಂಟಾಗಿದ್ದ ಉಷ್ಣ ಮಾರುತ ಪರಿಚಲನೆಯು (anti cyclonic circulation) ವಿಸ್ತಾರಗೊಂಡು ಬಂಗಾಳಕೊಲ್ಲಿಯ ಮೂಲಕ ಬೀಸುವ ಗಾಳಿಯು ಪ್ರಭಲಗೊಂಡಿದ್ದು, ಮುಂದಿನ ಒಂದು ವಾರದ ಕಾಲ ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ, ಮಾರ್ಚ್ 17ರಿಂದ 19ರ ತನಕ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
No comments:
Post a Comment