ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಸಂಜೆ ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈ ಬೇಸಿಗೆ ಮಳೆಯು ಮಾರ್ಚ್ 21ರ ತನಕ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈ ಬೇಸಿಗೆ ಮಳೆಯು ಮಾರ್ಚ್ 21ರ ತನಕ ಮುಂದುವರಿಯುವ ಸೂಚನೆಗಳಿವೆ.
ಉತ್ತರ ಒಳನಾಡು : ನಿನ್ನೆ ಧಾರವಾಡದಲ್ಲಿ ಅನಿರೀಕ್ಷಿತ ಮಳೆಯಾಗಿತ್ತು.
ಇವತ್ತು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಗುಲ್ಬರ್ಗ, ಯಾದಗಿರಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈ ಬೇಸಿಗೆ ಮಳೆಯು ಮಾರ್ಚ್ 21ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತು ಮಳೆಯ ಸಾಧ್ಯತೆ ಇಲ್ಲದಿದ್ದರೂ ತಾಪಮಾನ ಏರಿಕೆಯಿಂದ ಮಾರ್ಚ್ 16ರಿಂದ ಒಂದೆರಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
No comments:
Post a Comment