Advertise

16 March 2026

17.03. 2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆಗಳಿವೆ. 
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ, ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ವಿಜಯಪುರ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು ; ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಮಾರ್ಚ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. 


No comments:

Post a Comment

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಕಾಸರಗೋಡು, ದಕ್ಷಿಣ ಕನ್ನಡ,...