Advertise

18 March 2026

19.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಇವತ್ತು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ತೀರ ಭಾಗಗಳಲ್ಲಿ ಸಂಜೆ ಕಡಿಮೆ ಇದ್ದರೆ ಮುಂಜಾನೆ ಮಳೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಗಾಳಿಯ ಬೀಸುವಿಕೆಯು ಅತಿ ನಿಧಾನ ಗತಿಯಲ್ಲಿ ಹಾಗೂ ನಿರ್ದಿಷ್ಟ ದಿಕ್ಕು ಇಲ್ಲದ ಕಾರಣ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. 
ರಾಜ್ಯದಲ್ಲಿ ಈ ಮಳೆಯು ಮಾರ್ಚ್ 20ರ ತನಕ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮಾರ್ಚ್ 25 ಅಥವಾ 27ರ ತನಕ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

20.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...