ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ಅರಬ್ಬಿ ಸಮುದ್ರದ ಪ್ರತ್ಯಾವರ್ತ ಮಾರುತವು (Anti-cyclonic circulation) ಶಿಥಿಲಗೊಳ್ಳುತ್ತಿದ್ದು, ಗಾಳಿಯ ಚಲನೆಯು ಯಥಾಸ್ಥಿತಿಗೆ ಮರಳುತ್ತಿದೆ. ( ಭೂ ಪ್ರದೇಶದ ಕಡೆಗೆ). ಇದರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ.
No comments:
Post a Comment