Advertise

25 March 2026

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ ಒಂದೆರಡು ದಿನ ಮಳೆ ಕಡಿಮೆಯಾದರೂ ಎಪ್ರಿಲ್ 4 ಅಥವಾ 5ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆ ಇರಬಹುದು.
ಈಗಿನಂತೆ ಈ ಬೇಸಿಗೆ ಮಳೆಯು ಎಪ್ರಿಲ್ 5ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಳೆಯ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ, ಚಿತ್ರದುರ್ಗ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಧ್ಯಮ ಸ್ತರದಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಮಧ್ಯ ಭಾರತದಲ್ಲಿ ಪ್ರತ್ಯಾವರ್ತ ಮಾರುತಗಳ (Anti-cyclonic circulation) ಚಲನೆ ಉಂಟಾಗಿದ್ದು, ಉತ್ತರ ಕರ್ನಾಟಕದಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಮಾರ್ಚ್ 28ರ ನಂತರ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ. 

No comments:

Post a Comment

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಕಾಸರಗೋಡು, ದಕ್ಷಿಣ ಕನ್ನಡ,...