Advertise

27 March 2026

28.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಗಳ ಕಾರ್ಕಳ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಾರ್ಚ್ 28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕೊಪ್ಪ, ಆಗುಂಬೆ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 28ರಿಂದ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 28ರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಪ್ರತ್ಯಾವರ್ತ ಮಾರುತಗಳು (Anti-cyclonic circulation ಅಥವಾ ಮೇಲ್ಮೈ ಸುಳಿಗಾಳಿ) 
ಮುಂದುವರಿದಿದ್ದು, ಇದರಿಂದ ಸಮುದ್ರದ ಕಡೆಯಿಂದ ಸಾಗಿರುವ ಮೋಡದಲ್ಲಿ ಅತ್ಯಧಿಕ  ತೇವಾಂಶ ಇರುವುದರಿಂದ ಹಾಗೂ ಮೇಲ್ಸ್ತರದ ಗಾಳಿಯ ಚಲನೆಯು ನಿಧಾನ ಗತಿಯಲ್ಲಿರುವುದರಿಂದ ಅಲ್ಲಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. 

No comments:

Post a Comment

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ...