Advertise

28 March 2026

29.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 4ರ ತನಕ ಈ ಮಳೆಯು ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 4ರ ತನಕ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದ್ದರೂ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ಮ 29ರಿಂದ ಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ರಿಂದ 3 ದಿವಸಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಅರಬ್ಬಿ ಸಮುದ್ರದ ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಅತಿ ಸಣ್ಣ ಪ್ರಮಾಣದ ಪ್ರತ್ಯಾವರ್ತ ಮಾರುತಗಳು ಮೇಲ್ಮೈ ಸುಳಿಗಾಳಿ
(Anti-cyclonic circulation ) ಉಂಟಾದ್ದರಿಂದ ಇವತ್ತು ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. 


No comments:

Post a Comment

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...