Advertise

01 April 2026

02.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಹುತೇಕ ಭಾಗಗಳಲ್ಲಿ ಹಾಗೂ ಕಡಬ ತಾಲೂಕಿನ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಉಳಿದ ತಾಲ್ಲೂಕುಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗಿದೆ.
ಇವತ್ತು ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ, ತೀವ್ರತೆ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈ ಮಳೆಯ ಎಪ್ರಿಲ್ 4ರ ತನಕ ಇರಲಿದ್ದು, ನಂತರ ಕಡಿಮೆಯಾದರೂ, ಈಗಿನಂತೆ ಎಪ್ರಿಲ್ 10ರಿಂದ ಮತ್ತೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. 

ಮಲೆನಾಡು : ನಿನ್ನೆ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯಾಗಿದೆ.
ಇವತ್ತು ಸಹ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯವಾಗಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 5ರಿಂದ ಮಳೆ ಕಡಿಮೆಯಾದರೂ ಎಪ್ರಿಲ್ 10 ರಿಂದ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 2ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಆದರೆ ಗಾಳಿಯ ದಿಕ್ಕು ಬದಲಾದರೆ ಮೈಸೂರು ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 5ರಿಂದ ಮಳೆ ಕಡಿಮೆಯಾದರೂ ಎಪ್ರಿಲ್ 10ರಿಂದ ಮತ್ತೆ ಮಳೆಯ ವಾತಾವರಣ ಉಂಟಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ಹಾಗೂ ಅರಬ್ಬಿ ಸಮುದ್ರದಲ್ಲಿ ಪ್ರತ್ಯಾವರ್ತ ಮಾರುತಗಳು ಮತ್ತೆ ಚುರುಕಾಗಿವೆ. ಇದು ಹೀಗೆ ಮುಂದುವರಿದರೆ ಮುಂದಿನ ಮುಂಗಾರು ಮಾರುತಗಳು ದುರ್ಬಲವಾಗುವ ಸಾಧ್ಯತೆಗಳಿವೆ. ಈಗಾಗಲೇ ಹೆಚ್ಚಿನ ಹವಾಮಾನ ಮುನ್ಸೂಚನಾ ಸಂಸ್ಥೆ ವರದಿಗಳು ಭಾರತದಲ್ಲಿ ಜೂನ್ ತಿಂಗಳಲ್ಲಿ ಎಲ್ನಿನೋ ಆರಂಭವಾಗಿ ಮುಂಗಾರು ದುರ್ಬಲತೆಯನ್ನು ಸಾರುತ್ತಿವೆ. 

No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...