Advertise

02 April 2026

03.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಮಧ್ಯಾಹ್ನ ನಂತರ ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವದಿಂದ ಪೂರ್ವದ ಮಳೆ ಸಾಧ್ಯತೆ ಕಡಿಮೆ ಇರಬಹುದು. ಪಶ್ಚಿಮದ ಅಂದರೆ ಅರಬ್ಬಿ ಸಮುದ್ರದ ಕಡೆಯಿಂದ ಮಳೆ ಬಂದರೆ ತೀವ್ರತೆ ಕಡಿಮೆ ಇದ್ದು ಗುಡುಗು ಸಾಧ್ಯತೆಯೂ ಕಡಿಮೆ ಇರಬಹುದು.

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ಇವತ್ತು ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

ಉತ್ತರ ಒಳನಾಡು : ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 




No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...