03 April 2026

04.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಪಶ್ಚಿಮದ ಅಂದರೆ ಅರಬ್ಬಿ 
ಸಮುದ್ರದ ಗಾಳಿಯ ವಿಸ್ತರಣೆ ಕಡಿಮೆ ಇರುವುದರಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಮುಂಜಾನೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 5ರ ನಂತರ ಮಳೆಯ ಪ್ರಮಾಣ ಕಡಿಮೆಯಾದರೂ ಎಪ್ರಿಲ್ 10ರಿಂದ ಮತ್ತೆ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಎಪ್ರಿಲ್ 5ರಿಂದ ಮಳೆ ಕಡಿಮೆಯಾದರೂ 10ರಿಂದ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ.

ಉತ್ತರ ಒಳನಾಡು :  ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಎಪ್ರಿಲ್ 4ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು :  ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 4ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 10ರ ನಂತರ ಮಳೆ ಪುನರಾರಂಭಗೊಳ್ಳುವ ಸಾಧ್ಯತೆಗಳಿವೆ. 


No comments:

Post a Comment