Advertise

05 April 2026

05.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಕರಾವಳಿ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದ ಉಳಿದ ಭಾಗಗಳ ಅಲ್ಲಲ್ಲಿ ಹಾಗೂ ಉಡುಪಿಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನ ಹಾಗೂ ಮಧ್ಯಾಹ್ನ ನಂತರ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 5 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಎಪ್ರಿಲ್ 10ರ ನಂತರ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು :  ರಾಜ್ಯದ ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಹಾಗೂ ಹಾಸನ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 6ರಿಂದ ಮಳೆಯ ಸಾಧ್ಯತೆ ಕಡಿಮೆಯಾಗಲಿದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 6ರಿಂದ ಹೆಚ್ಚಿನ ಅವಧಿ ಬಿಸಿಲು ಹಾಗೂ ತಾಪಮಾನ ಏರಿಕೆಯಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 6ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...