Advertise

05 April 2026

06.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಪಶ್ಚಿಮದ ಅಂದರೆ ಅರಬ್ಬಿ ಸಮುದ್ರದ ಕಡೆಯಿಂದ ಮೇಲ್ಸ್ತರ ಹಾಗೂ ಮಧ್ಯಮ ಸ್ತರಗಳಲ್ಲಿ ಪ್ರಭವಾದ ಕಡಿಮೆ ತೇವಾಂಶ ಹೊಂದಿದ ಗಾಳಿಯ ಬೀಸುವಿಕೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಆದರೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಸ್ಥಳೀಯ ಮೋಡಗಳ ಸಹಾಯದಿಂದ ಸಣ್ಣ ಪ್ರಮಾಣದ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 6ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಹಗಲು ಬಿಸಿಲು ಹಾಗೂ ತಾಪಮಾನ ಏರಿಕೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಶಿೃಂಗೇರಿ, ಕೊಪ್ಪ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 6ರಿಂದ ಮಳೆಯ ಸಾಧ್ಯತೆ ಕ್ಷೀಣಿಸಲಿದ್ದು, ಬಿಸಿಲು ಹಾಗೂ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.
ಈಗಿನಂತೆ ಎಪ್ರಿಲ್ 6ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಪ್ರಭಲ ಗಾಳಿಯ ಪ್ರಭಾವದಿಂದ ಪೂರ್ವದ ಮೋಡಗಳು ದುರ್ಬಲಗೊಳ್ಳುವ ಲಕ್ಷಣಗಳಿವೆ. 
ಬಂಗಾಳಕೊಲ್ಲಿಯ ಕಡೆಯ ಗಾಳಿ ಪ್ರಭಲವಾಗದ ಹೊರತು ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಬಹುದು. 

No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...