ಕರಾವಳಿ : ನಿನ್ನೆ ರಾತ್ರಿಯಿಂದ ವಾತಾವರಣದಲ್ಲಿ ಬದಲಾವಣೆಯಾಗದ್ದು, ಗಾಳಿಯು ಅರಬ್ಬಿ ಸಮುದ್ರದ ಕಡೆಯಿಂದ ಪೂರ್ವಕ್ಕೆ ಚಲಿಸೂತ್ತಿದೆ. ಇದೆ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಕಡೆಯಿಂದಲೂ ಪಶ್ಚಿಮಕ್ಕೆ ಗಾಳಿ ಚಲನೆ ಆರಂಭವಾಗಿದೆ.
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗ ಇವತ್ತಿನಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಮಲೆನಾಡು : ರಾಜ್ಯದ ಮಲೆನಾಡಿನ 888ಕೊಡಗು ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಸಂಜೆ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಬಹುದು.
ರಾಜ್ಯದಲ್ಲಿ ಇವತ್ತಿನಿಂದ ಮತ್ತೆ ಮಳೆಯ ವಾತಾವರಣವು ಉಂಟಾಗುವ ಲಕ್ಷಣಗಳಿವೆ.
ಪ್ರತೀ ದಿನ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಮಳೆಯ ನಿರೀಕ್ಷೆ ಇದೆ.
No comments:
Post a Comment